ಚಿಕ್ಕಮಗಳೂರು: ವಿದ್ಯುತ್ ಇಲ್ಲದೆ ಸೋಲಾರ್ (Solar) ಬೀದಿ ದೀಪದ ಕೆಳಗೆ ಸರ್ಕಾರಿ ವಸತಿ ಶಾಲೆ ವಿದ್ಯಾರ್ಥಿನಿಯರು (Students) ಓದುವ ಪರಿಸ್ಥಿತಿ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ.
ಎನ್.ಆರ್.ಪುರ ಪಟ್ಟಣದ ಕೈಮರದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ರಾತ್ರಿ ವಿದ್ಯುತ್ ಇಲ್ಲದ ಕಾರಣ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಮರಿಗೆ ಉಡುಗೊರೆ, ರೈತರಿಗೆ ಗಾಯದ ಮೇಲೆ ಬರೆ: ಅಶೋಕ್ ಕಿಡಿ
Advertisement
Advertisement
ಮುಂದಿನ ತಿಂಗಳಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುವ ವೇಳೆಯೇ ಇಂತಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಲೋಡ್ ಶೆಡ್ಡಿಂಗ್ ಹೆಸರಲ್ಲಿ ಕರೆಂಟ್ ತೆಗೆಯುತ್ತಿದ್ದರೆ ಮಕ್ಕಳು ಹೇಗೆ ಓದುತ್ತಾರೆ? ಸರ್ಕಾರಿ ವಸತಿ ಶಾಲೆಯಲ್ಲೇ ಮಕ್ಕಳು ಸಂಜೆ ವೇಳೆ ಶಾಲೆ ಕಟ್ಟಡದಿಂದ ಹೊರಬಂದು ಕಾಂಪೌಂಡ್ ಒಳಗೆ ಬೀದಿ ದೀಪದ ಸೋಲಾರ್ ವಿದ್ಯುತ್ ಕೆಳಗೆ ಓದುತ್ತಿದ್ದಾರೆ. ಇದರಿಂದ ಶಾಲಾ ಆವರಣದಲ್ಲಿ ಹೆಣ್ಣು ಮಕ್ಕಳಿಗೆ ಸಮಸ್ಯೆಯಾದರೆ ಜವಾಬ್ದಾರಿ ಯಾರು ಎಂದು ಸ್ಥಳೀಯರು ಪ್ರಶ್ನಿಸಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲೇ ಬಡಿದಾಡಿಕೊಂಡ ಕಾರ್ಯಕರ್ತರು
Advertisement
Advertisement
ಇಂಧನ ಸಚಿವ ಜಾರ್ಜ್ ಅವರೇ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರು. ಅಷ್ಟೇ ಅಲ್ಲದೇ ಟಿ.ಡಿ.ರಾಜೇಗೌಡ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿದ್ದಾರೆ. ಈ ಎನ್.ಆರ್.ಪುರ ತಾಲೂಕು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡರ ಆಡಳಿತದ ವ್ಯಾಪ್ತಿಗೆ ಸೇರಲಿದೆ. ಹೀಗೆ ಸರ್ಕಾರಿ ವಸತಿ ಶಾಲೆಯಲ್ಲೇ ವಿದ್ಯುತ್ ಇಲ್ಲದೆ ಮಕ್ಕಳು ಸೋಲಾರ್ ಬೀದಿ ದೀಪದ ಕೆಳಗೆ ಓದುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸ್ಥಳೀಯರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹೆಣ್ಣು ಮಕ್ಕಳು ಇರುವ ವಸತಿ ಶಾಲೆ ಸರ್ಕಾರ ಕೂಡಲೇ ವಸತಿ ಶಾಲೆಗೆ ಯುಪಿಎಸ್ ಅಳವಡಿಸಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸ್ಕೈವಾಕ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ – ಡಿಕೆಶಿಗೆ ಸೂರ್ಯ ಪತ್ರ