ಮುಂಬೈ: ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋಕಾನ್ ಗ್ರೂಪ್‌ನ ಅಧ್ಯಕ್ಷ ವೇಣುಗೋಪಾಲ್ ಧೂತ್ (71) ಅವರನ್ನು ಕೇಂದ್ರ ತನಿಖಾ ದಳ (CBI) ಸೋಮವಾರ ಬಂಧಿಸಿದೆ.
ಧೂತ್ ಅವರನ್ನು ಸಿಬಿಐ ಮುಂಬೈನಲ್ಲಿ ಬಂಧಿಸಿದೆ. ಸಿಬಿಐ ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ವೀಡಿಯೋಕಾನ್ ಸಂಸ್ಥಾಪಕನನ್ನು ಹಾಜರುಪಡಿಸಲಿದೆ. ಇದನ್ನೂ ಓದಿ: ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ 12 ಮಂದಿಗೆ ಕೊರೊನಾ
Advertisement
Advertisement
ಕ್ರಿಮಿನಲ್ ಪಿತೂರಿ ಮತ್ತು ನಿಬಂಧನೆಗಳಿಗೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸಿಬಿಐ, ಕೊಚಾರ್ಸ್ ಮತ್ತು ಧೂತ್ ಜೊತೆಗೆ ದೀಪಕ್ ಕೊಚಾರ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವೀಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ನಿರ್ವಹಿಸುತ್ತಿರುವ ನುಪವರ್ ರಿನ್ಯೂವಬಲ್ಸ್ (NRL) ಕಂಪನಿಗಳ ಮೇಲೆ ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು
Advertisement
ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಆರ್‌ಬಿಐ ಮಾರ್ಗಸೂಚಿಗಳು ಮತ್ತು ಬ್ಯಾಂಕ್‌ನ ಸಾಲ ನೀತಿಯನ್ನು ಉಲ್ಲಂಘಿಸಿ ಧೂತ್ ವಿಡಿಯೋಕಾನ್ ಗ್ರೂಪ್‌ನ ಕಂಪನಿಗಳಿಗೆ ಐಸಿಐಸಿಐ ಬ್ಯಾಂಕ್ 3,250 ಕೋಟಿ ರೂ. ಸಾಲ ಸೌಲಭ್ಯಗಳನ್ನು ಮಂಜೂರು ಮಾಡಲಾಗಿದೆ ಎಂದು ಸಿಬಿಐ ಆರೋಪಿಸಿದೆ.