ಕಲಬುರಗಿ: ಗ್ಯಾರಂಟಿಯಿಂದ (Gguarantee Schemes) ರೈತರ ಸಾಲಮನ್ನಾ (Loan Waiver) ಮಾಡಲು ಆಗಲ್ಲ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಬಿ.ಕೆ.ಹರಿಪ್ರಸಾದ್ (B.K. Hariprasad) ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬರದ ಹಿನ್ನೆಲೆ ರೈತರ (Farmers) ಸಾಲಮನ್ನಾ ವಿಚಾರವಾಗಿ ಮಾತನಾಡಿದರು. ಸದ್ಯ ಗ್ಯಾರಂಟಿಯಿಂದ ಸಾಲಮನ್ನಾ ಮಾಡಲು ಆಗಲ್ಲ. ಆದರೆ ರೈತರಿಗೆ ಏನು ಸಹಾಯ ಮಾಡಬೇಕು ಆ ಸಹಾಯ ನಾವು ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಗೃಹಜ್ಯೋತಿ ಮರುಪರಿಶೀಲನೆಗೆ ಕೊನೇ ಅವಕಾಶ – 16 ಲಕ್ಷ ಫಲಾನುಭವಿಗಳು ಯೋಜನೆಯ ಲಾಭ ಕಳೆದುಕೊಳ್ತಾರಾ?
ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ವಿಚಾರವಾಗಿ, ನಮ್ಮ ಅಭ್ಯರ್ಥಿ ಶರಣಪ್ಪ ಮಟ್ಟೂರ್ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಶಿಕ್ಷಕರು ನಮ್ಮ ಅಭ್ಯರ್ಥಿಗೆ ಮತ ಕೊಡಬೇಕು ಎಂದು ವಿನಂತಿಸುತ್ತೇವೆ ಎಂದರು.
ರಾಜ್ಯದಲ್ಲಿ ಮೂರನೇ ಸಿಎಂ ಬರುತ್ತಾರೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರವಾಗಿ, ಅವರು ತಿರುಕನ ಕನಸು ಕಾಣುತ್ತಿದ್ದಾರೆ. ನಮ್ಮ 25 ಜನ ಶಾಸಕರು ಬರ್ತಾರೆ ಅಂತಾ ಅವರು ತಿಳಿದುಕೊಂಡಿದ್ದಾರೆ. ಹೀಗಾಗಿ ವಿಜಯೇಂದ್ರ ಆಗಾಗ ಈ ರೀತಿ ಮಾತನಾಡುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಕಂಬಳಕ್ಕೆ ವಿದ್ಯುಕ್ತ ಚಾಲನೆ – ಇಂದಿನಿಂದ 2 ದಿನ ದಸರೆಯಲ್ಲಿ ಕರಾವಳಿ ಸಂಸ್ಕೃತಿಯ ಸಂಭ್ರಮ
