ಶಿವಮೊಗ್ಗ: ಭೂತಾನ್ (Bhutan) ದೇಶದಿಂದ ಅಡಿಕೆ (Areca Nut) ಆಮದು (Import) ಮಾಡಿಕೊಳ್ಳದಂತೆ ಆಗ್ರಹಿಸಿ, ಎಲೆ ಚುಕ್ಕೆ ರೋಗ ಬಾಧಿತ ರೈತರಿಗೆ (Farmers) ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿ (Shivamogga) ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
Advertisement
ನಗರದ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರ ಭೂತಾನ್ ದೇಶದಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿಕೊಳ್ಳಲು ನಿರ್ಧರಿಸಿದೆ. ಇದಕ್ಕೆ ಆಮದು ಸುಂಕ ವಿನಾಯ್ತಿ ನೀಡಲಾಗಿದೆ. ಈ ಅಡಿಕೆ ನಮ್ಮ ದೇಶಕ್ಕೆ ಬರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅಡಿಕೆ ಕಾರ್ಯಪಡೆ ಅಧ್ಯಕ್ಷ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ. ಇದನ್ನೂ ಓದಿ: ನೀವು ಬಿಕಿನಿ ಬೇಕಾದರೆ ಹಾಕಿಕೊಳ್ಳಿ, ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ಹಿಜಬ್ ಧರಿಸುತ್ತಾರೆ: ಓವೈಸಿ
Advertisement
Advertisement
ಆದರೆ ಅಡಿಕೆ ಆಮದಿನಿಂದಾಗಿ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕಡಿಮೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಈ ಕೂಡಲೇ ಅಡಿಕೆ ಆಮದು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದಂಡ ಹಾಕಿದ್ದಕ್ಕೆ ಜಡ್ಜ್ ಮೇಲೆ ಚಪ್ಪಲಿ ತೂರಿದ ವ್ಯಕ್ತಿ ಅಂದರ್