ಅಪ್ರಾಪ್ತೆ ಮೇಲೆ ಅತ್ಯಾಚಾರ ಯತ್ನ – ಕಾಮುಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ

Public TV
1 Min Read
gdg thalitha

– ಬಿಡಿಸಲು ಬಂದ ತಂದೆಯ ಮೇಲೆ ಹಲ್ಲೆ

ಗದಗ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನಿಸಿದ ಕಾಮುಕನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಸಿದ ಘಟನೆ ಗದಗ ಜಿಲ್ಲೆ ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 22 ವರ್ಷದ ಯುವಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವಿಷಯ ತಿಳಿದ ಸಾರ್ವಜನಿಕರು ಕಾಮುಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವೇಳೆ ಕಾಮುಕನ ತಂದೆ ಆತನನ್ನು ಬಿಡಿಸಲು ಬಂದಿದ್ದಾರೆ.

101205901 rape protest

ಸಾರ್ವಜನಿಕರು ಕಾಮುಕನನ್ನು ಬಿಡಿಸಲು ಬಂದ ತಂದೆಗೂ ಗೂಸಾ ಕೊಟ್ಟಿದ್ದಾರೆ. ಬಳಿಕ ಜನರು ಕಾಮುಕನ ತಂದೆಗೆ ರಸ್ತೆಯಲ್ಲಿ ಥಳಿಸುತ್ತ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಜನರ ಥಳಿತಕ್ಕೆ ಆರೋಪಿ ತಂದೆಯ ಮುಖ, ತಲೆ ಭಾಗಕ್ಕೆ ಗಾಯವಾಗಿದ್ದು, ಗದಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಡಿಸಲು ಹೋದ ತಂದೆಯನ್ನು ಜನರು ಥಳಿಸುತ್ತಿದ್ದ ವೇಳೆ ಆರೋಪಿ ಅಲ್ಲಿಂದ ಪರಾರಿ ಆಗಿದ್ದಾನೆ. ಅಲ್ಲದೆ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸಲು ಪೊಲೀಸರು ಮಧ್ಯ ಪ್ರವೇಶಿಸಿ ಲಘು ಲಾಠಿ ಪ್ರಹಾರ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *