ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಲಾಹೋರ್ (Lahore) ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು (Blast) ಸಂಭವಿಸಿವೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: Operation Sindoor | ಭಾರತದ ದಾಳಿಯಲ್ಲಿ 31 ಮಂದಿ ಹತ್ಯೆ, 46 ಮಂದಿಗೆ ಗಾಯ – ಹೊಣೆ ಹೊತ್ತ ಪಾಕ್ ಸೇನೆ
Three explosions heard near Lahore Airport in Pakistan; Flight operations affected #lahore #pakistan #explosions #operationsindoor @verghesescribe pic.twitter.com/tkPqrHuNDu
— News9 (@News9Tweets) May 8, 2025
ಸ್ಥಳೀಯ ಭದ್ರತಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಪ್ರದೇಶವನ್ನು ಸೀಲ್ ಮಾಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪಾಕಿಸ್ತಾನ ವಾಯುಪಡೆಯ (ಪಿಎಎಫ್) ತರಬೇತಿ ಸಮಯದಲ್ಲಿ ಸ್ಫೋಟ ಸಂಭವಿಸಿದೆ.
ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆವರಣದಲ್ಲಿ ನೆಲೆಗೊಂಡಿರುವ ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?
ಮುನ್ನೆಚ್ಚರಿಕೆ ಕ್ರಮವಾಗಿ, ವಾಲ್ಟನ್ ರಸ್ತೆಯಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಈ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.