ಹುಬ್ಬಳ್ಳಿ: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ (Rain) ಧಾರವಾಡ (Dharwad) ಜಿಲ್ಲೆ ಅಕ್ಷರಶಃ ನಲುಗಿ ಹೋಗಿದೆ. ವರುಣಾರ್ಭಟಕ್ಕೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಜನತೆ ಕಂಗಾಲಾಗಿದೆ.
ಮಳೆಯಿಂದ ಹಳ್ಳಗಳು ತುಂಬಿ ಹರಿಯುತ್ತಿದ್ದು, ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ (Drowning) ವ್ಯಕ್ತಿಯನ್ನು ಸ್ಥಳೀಯರೇ ರಕ್ಷಣೆ (Rescue) ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಹಾಗೂ ಬಗಡಗೇರಿ ಗ್ರಾಮದ ಮಧ್ಯೆ ನಡೆದಿದೆ. ಇಂದು ಬೆಳಗ್ಗೆ ಹಳ್ಳಕ್ಕೆ ಅಡ್ಡಲಾಗಿ ಕಟ್ಟಿರುವ ಸೇತುವೆ (Bridge) ದಾಟುವಾಗ ವ್ಯಕ್ತಿ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಬಟ್ಟೆಗಳನ್ನು (Clothes) ಜೋಡಿಸಿ, ಹಗ್ಗ ತಯಾರಿಸಿ ಅದರಿಂದ ಆ ವ್ಯಕ್ತಿಯನ್ನು ಕಾಪಾಡಿದ್ದಾರೆ.
Advertisement
Advertisement
ಈ ಘಟನೆಯಾದ ಬಳಿಕ ಅದೇ ಸೇತುವೆ ಮೇಲೆ ಹಳ್ಳ ದಾಟಲು ಪ್ರಯತ್ನಿಸಿದ ಬೈಕ್ ಸವಾರ ಕೊಚ್ಚಿಹೋಗಿದ್ದಾನೆ. ಇದನ್ನು ಕಂಡ ಸ್ಥಳೀಯರು ಆತನನ್ನು ಕೂಡಾ ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ: ಸಕ್ಕರೆನಾಡಲ್ಲಿ ಮಹಾಕುಂಭ ಮೇಳ ಸಂಭ್ರಮ- 4 ದಿನಗಳ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ
Advertisement
Advertisement
ಕಳೆದ 2 ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಅನ್ನದಾತರು ಕಂಗಾಲಾಗಿದ್ದಾರೆ. ರಕ್ಕಸ ಮಳೆಗೆ ಶೇಂಗಾ ಬೆಳೆ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ಬೆಳೆ ನೀರಿನಲ್ಲಿ ಕೊಚ್ಚಿಹೋದ ಘಟನೆ ಕುಂದಗೋಳ ತಾಲೂಕಿನಲ್ಲಿ ನಡೆದಿದೆ. ಈ ಬಾರಿ ತಾಲೂಕಿನಲ್ಲಿ ಅತಿ ಹೆಚ್ಚು ಶೇಂಗಾ ಬೆಳೆಯಲಾಗಿತ್ತು. ಶೇಂಗಾ ಬೆಳೆ ಕಟಾವು ಮಾಡಿ ರಾಶಿ ಮಾಡುವ ಸಮಯದಲ್ಲಿಯೇ ವಕ್ಕರಿಸಿರುವ ಮಳೆರಾಯ ರೈತರಿಗೆ ವಿಪರೀತ ತೊಂದರೆ ನೀಡುತ್ತಿದ್ದಾನೆ. ಇದನ್ನೂ ಓದಿ: ಹಿಜಬ್ ವಿವಾದ – ಗುರುವಾರ ಸುಪ್ರೀಂ ತೀರ್ಪು ಪ್ರಕಟ ಸಾಧ್ಯತೆ