ಬೆಂಗಳೂರು: ಕ್ಷೌರಿಕ ವೃತ್ತಿ ಪುನರಾರಂಭಿಸಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಗಳಿವೆ ಸಚಿವ ಸುರೇಶ್ ಕುಮಾರ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.
ಕೊರೊನಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕ್ಷೌರಿಕ ವೃತ್ತಿ(ಸವಿತಾ ಸಮಾಜ)ಯವರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅದರ ಜೊತೆ ದಂತ ವೈದ್ಯಕೀಯ ಚಿಕಿತ್ಸೆಯೂ ಅವಶ್ಯಕವಾಗಿದೆ. ಈ ಎರಡು ವಲಯಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಪ್ರಾರಂಭ ಮಾಡಲು ಅವಕಾಶ ಕೊಡಬೇಕು ಎಂದು ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
Advertisement
Advertisement
ಈ ಎರಡು ವೃತ್ತಿಗಳಲ್ಲಿ ಕಾರ್ಯನಿರತರಾಗಿರುವವರು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳುವ ಸಾಧ್ಯತೆಗಲು ತೀರಾ ಕಡಿಮೆ ಇರುವ ಹಿನ್ನೆಲೆಯಲ್ಲಿ ಪರಸ್ಪರ ಸೋಂಕು ಹರಡುವ ಸಾಧ್ಯತೆಗಳು ಇಲ್ಲದಿಲ್ಲ. ಅದಾಗ್ಯೂ ಸೋಂಕು ಗರಡದಂತೆ ನೋಡಿಕೊಳ್ಳುವ ಮೂಲಕ ಈ ವೃತ್ತಿಗಳ ಪುನರಾರಂಭಕ್ಕೆ ಏನೆಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಯಾಔ ಮಾರ್ಗದರ್ಶಿ ಸೂತ್ರಗಳನ್ನು ಅನುಸರಿಸಬೇಕು ಎಂಬುದರ ಕುರಿತು ಸುತ್ತೋಲೆ ಹೊರಡಿಸಲು ಸಂಬಂಧಿಸಿದ ಇಲಾಖೆಗೆ ಅಗತ್ಯ ಸೂಚನೆ ನೀಡಬೇಕು. ಈ ಮೂಲಕ ಈ ವೃತ್ತಿಗಳನ್ನು ಅವಲಂಬಿಸಿರುವವರು ಸುಗನ ಜೀವನ ನಡೆಸಲು ಅನವು ಮಾಡಿಕೊಡಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ.
Advertisement