ನವದೆಹಲಿ: ಮುಂದಿನ ಕೆಲ ತಿಂಗಳುಗಳ ಕಾಲ ವಿಮಾನ ಪ್ರಯಾಣಕ್ಕೆ ವೈದ್ಯರ ಸರ್ಟಿಫಿಕೇಟ್ ಕಡ್ಡಾಯವಾಗುವ ಸಾಧ್ಯತೆಗಳು ಕಂಡು ಬಂದಿದೆ. ಡಾಕ್ಟರ್ ಪ್ರಮಾಣ ಪತ್ರದ ಜೊತೆಗೆ ಪ್ರಯಾಣದ ವೇಳೆ ಗ್ಲೌಸ್, ಮಾಸ್ಕ್ ಕಡ್ಡಾಯ ಮಾಡುವ ಚಿಂತನೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ನಡೆದಿದೆ.
ಲಾಕ್‍ಡೌನ್ ಅವಧಿ ಅಂತ್ಯವಾಗಲು ಐದು ದಿನಗಳು ಬಾಕಿ ಉಳಿದುಕೊಂಡಿದೆ. ಈ ನಡುವೆ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಹಾರಾಟ ಪುನಾರಂಭಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ.
Advertisement
Advertisement
ನಿಯಮಗಳ ಸಿದ್ಧಪಡಿಸುವ ನಿಟ್ಟಿನಲ್ಲಿ ವೈದ್ಯರು, ವಿಮಾನ ಕಂಪನಿಗಳ ಸಿಇಒಗಳು, ಕೇಂದ್ರ ಸರ್ಕಾರದ ಅಧಿಕಾರಿಗಳಿರುವ ಸಮ್ಮುಖದಲ್ಲಿ ತಾಂತ್ರಿಕ ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು, ಇಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.
Advertisement
ಮಾಹಿತಿಗಳ ಪ್ರಕಾರ. ವಿಮಾನಗಳ ಹಾರಾಟಕ್ಕೆ ಅವಕಾಶ ನೀಡಿದ ಮೇಲೆ ಕನಿಷ್ಠ ಮೂರು ತಿಂಗಳು ಕಾಲ ವೈದ್ಯರ ಪ್ರಮಾಣಪತ್ರ, ಮಾಸ್ಕ್, ಗ್ಲೌಸ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಬಹುತೇಕ ದೇಶಿಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಕ್ಕೆ ಈ ನಿಯಮಗಳು ಅನ್ವಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.