Connect with us

Crime

ಮಂಗಳೂರಿನಲ್ಲಿ ಲಾಕ್‍ಡೌನ್ ಇದ್ರೂ ಮಾದಕ ವಸ್ತುಗಳ ಜಾಲ ಪತ್ತೆ

Published

on

Share this

ಮಂಗಳೂರು: ಲಾಕ್‍ಡೌನ್ ಇದ್ದರೂ ನಗರದಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲ ಹೆಚ್ಚುತ್ತಲೇ ಇದ್ದು, ಕೋಣಾಜೆ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರಿನಿಂದ ಕೇರಳಕ್ಕೆ ನಿಷೇಧಿತ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ ಸ್ವಿಫ್ಟ್ ಕಾರಿನ ಮೂಲಕ ಕೋಣಾಜೆ ಠಾಣಾ ವ್ಯಾಪ್ತಿಯ ಮುಡಿಪು ನಾಟೆಕಲ್ ರಸ್ತೆ ಮೂಲಕ ಕೇರಳಕ್ಕೆ ಸಾಗಾಟ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಪೊಲೀಸರು ಬಂಧಿಸಿದ್ದಾರೆ. ಇವರಿಂದ 3.90 ಲಕ್ಷ ರೂ. ಮೌಲ್ಯದ 65 ಗ್ರಾಂ. ಎಂಡಿಎಂಎ, 5 ಲಕ್ಷ ರೂ. ಮೌಲ್ಯದ ಸ್ವಿಫ್ಟ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

Click to comment

Leave a Reply

Your email address will not be published. Required fields are marked *

Advertisement