Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಿಕ್ಕಬಳ್ಳಾಪುರದಲ್ಲಿ 4 ವಾರ್ಡ್ ಹೊರತುಪಡಿಸಿ ಜಿಲ್ಲೆಯಾದ್ಯಂತ ಸಡಿಲಿಕೆ: ಜಿಲ್ಲಾಧಿಕಾರಿ ಆರ್.ಲತಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಚಿಕ್ಕಬಳ್ಳಾಪುರದಲ್ಲಿ 4 ವಾರ್ಡ್ ಹೊರತುಪಡಿಸಿ ಜಿಲ್ಲೆಯಾದ್ಯಂತ ಸಡಿಲಿಕೆ: ಜಿಲ್ಲಾಧಿಕಾರಿ ಆರ್.ಲತಾ

Corona

ಚಿಕ್ಕಬಳ್ಳಾಪುರದಲ್ಲಿ 4 ವಾರ್ಡ್ ಹೊರತುಪಡಿಸಿ ಜಿಲ್ಲೆಯಾದ್ಯಂತ ಸಡಿಲಿಕೆ: ಜಿಲ್ಲಾಧಿಕಾರಿ ಆರ್.ಲತಾ

Public TV
Last updated: May 4, 2020 6:49 pm
Public TV
Share
2 Min Read
Chikkaballapur DC 2
SHARE

– ಅಂಗಡಿ, ಮುಂಗಟ್ಟುಗಳಿಗೆ ಸಮಯ ನಿಗದಿ
– ಗೌರಿಬಿದನೂರು ಕೊರೊನಾ ಮುಕ್ತ ನಗರ

ಚಿಕ್ಕಬಳ್ಳಾಪುರ: ಜಿಲ್ಲೆ ಆರೆಂಜ್ ಝೋನ್ ವ್ಯಾಪ್ತಿಯಲ್ಲಿದ್ದು, ಚಿಕ್ಕಬಳ್ಳಾಪುರ ನಗರದ 17, 10, 12, 13 ನಾಲ್ಕು ವಾರ್ಡ್ ಹೊರತುಪಡಿಸಿ, ಜಿಲ್ಲೆಯಾದ್ಯಾಂತ ಸಡಿಲಿಕೆಗಳು ಅನ್ವಯವಾಗಲಿವೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಕೊರೊನಾ ಸೋಂಕಿತರ 17 ನೇ ವಾರ್ಡ್ ಹಾಗೂ ಅಕ್ಕ ಪಕ್ಕದ 3 ವಾರ್ಡುಗಳನ್ನ ಈಗಾಗಲೇ ಸೀಲ್‍ಡೌನ್ ಮಾಡಲಾಗಿದ್ದು, ಕಂಟೈನ್‍ಮೆಂಟ್ ಝೋನ್ ಅಂತ ಗುರುತಿಸಲಾಗಿದೆ. ಈ 4 ವಾರ್ಡುಗಳಲ್ಲಿ ಸೀಲ್‍ಡೌನ್ ಮುಂದುವರಿಯಲಿದ್ದು, ನಗರದ ಉಳಿದ ವಾರ್ಡುಗಳಿಗೆ ಸಡಲಿಕೆಗಳನ್ನ ನೀಡಲಾಗಿದೆ. ಚಿಕ್ಕಬಳ್ಳಾಪುರ ನಗರದ ನಾಲ್ಕು ವಾರ್ಡುಗಳು ಹೊರತುಪಡಿಸಿ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳು ಆರಂಭಿಸಲು ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಾತ್ರ ಅವಕಾಶವಿದೆ. ಆದರೆ ಗ್ರಾಮೀಣ ಭಾಗದಲ್ಲಿ ಬೆಳಗ್ಗೆ 07 ರಿಂದ ಸಂಜೆ 7 ರವರೆಗೆ ತೆರೆಯಲು ಅನುಮತಿಯಿದೆ.

Chikkballapura CITY 3

ರಾಜ್ಯಾದ್ಯಂತ ಇಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಮದ್ಯಪಾನಪ್ರಿಯರು ನಾ ಮುಂದು ತಾ ಮುಂದು ಅಂತ ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ. ಅದೇ ಆಸೆಗಣ್ಣಿನಿಂದ ಇಂದು ಬೆಳಗ್ಗೆ ಮದ್ಯ ಖರೀದಿಸಿಲು ಮುಂದಾಗಿದ್ದ ಮದ್ಯಪ್ರಿಯರಿಗೆ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಶಾಕ್ ಕಾದಿತ್ತು. ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿರೋ ಜಿಲ್ಲಾಡಳಿತ ಕೊನೆಗೆ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.

Chikkballapura CITY 1

ಚಿಕ್ಕಬಳ್ಳಾಪುರ ನಗರದಲ್ಲಿ ಮಾತ್ರ ಬೆಳಗ್ಗೆ 09 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಉಳಿದಂತೆ ಜಿಲ್ಲೆಯ ಇತರೆ ಭಾಗಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿದ್ದು, ಯಾವುದೇ ನಿರ್ಬಂಧವಿಲ್ಲ. ಸದ್ಯ ಜಿಲ್ಲೆಯಲ್ಲೂ ಸಹ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿರುವುದರಿಂದ ಮದ್ಯ ಪ್ರಿಯರು ಕಿಲೋಮೀಟರ್ ಗಟ್ಟಲೇ ಕ್ಯೂ ನಿಂತು ಮದ್ಯ ಖರೀದಿಸಿದ್ದಾರೆ. ಗೌರಿಬಿದನೂರು ತಾಲೂಕು ಕೋಟಾಲದಿನ್ನೆ ಹಾಗೂ ಬಾಗೇಪಲ್ಲಿ ನಗರದ ವೈನ್ ಶಾಪ್ ವೊಂದರ ಬಳಿ ಕಿಲೋಮೀಟರ್ ಗಟ್ಟಲೇ ಕ್ಯೂ ಇತ್ತು. ಇನ್ನೂ ಹಲವೆಡೆ ಸಹ ಸರದಿ ಸಾಲಿನಲ್ಲಿ ನಿಂತ ಮದ್ಯಪ್ರಿಯರು ಮದ್ಯ ಖರೀದಿಸಿದ್ದಾರೆ.

Chikkballapura CITY 7

ಕೆಲವೆಡೆ ಸಾಮಾಜಿಕ ಅಂತರ ನಿರ್ಲಕ್ಷ್ಯ ಮಾಡಿದ ಘಟನೆಗಳು ನಡೆದಿದ್ದು, ಮದ್ಯದಂಗಡಿಗಳ ಬಳಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ಜಿಲೆಯಲ್ಲಿ ಮೊಟ್ಟ ಮೊದಲ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಾಗೂ ಹಾಟ್‍ಸ್ಪಾಟ್ ಆಗಿದ್ದ ಗೌರಿಬಿದನೂರು ನಗರವನ್ನ ಕೊರೊನಾ ಮುಕ್ತ ಅಂತ ಕಂಟೈನ್‍ಮೆಂಟ್ ಝೋನ್ ನಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕೈಬಿಟ್ಟಿದೆ. ಇಷ್ಟು ದಿನ ಗೌರಿಬಿದನೂರು ನಗರದ ಹಿರೇಬಿದನೂರಿನ ವಾರ್ಡು ನಂಬರ್ 29 ಹಾಗೂ 30 ನ್ನ ಕಂಟೈನ್‍ಮೆಂಟ್ ಝೋನ್ ಆಗಿ ಗುರುತಿಸಲಾಗಿತ್ತು.

Chikkballapura CITY 2

ಸದ್ಯ ಗೌರಿಬಿದನೂರು ನಗರದಲ್ಲಿ ಕಳೆದ 21 ದಿನಗಳಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣ ಕಂಡು ಬರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗೌರಿಬಿದನೂರು ನಗರವನ್ನ ಕಂಟೈನ್‍ಮೆಂಟ್ ಝೋನ್ ವ್ಯಾಪ್ತಿಯಿಂದ ಬಿಡುಗಡೆ ಮಾಡಿದ್ದೇವೆ ಅಂತ ಡಿಸಿ ಆರ್ ಲತಾ ತಿಳಿಸಿದರು. ಉಳಿದಂತೆ ಸರಳವಾಗಿ ನಡೆಸಲು ಮದುವೆ, ಹಾಗೂ ಶುಭ ಸಮಾರಂಭಗಳಿಗೆ ಅವಕಾಶವಿದ್ದು 50 ಮಂದಿ ಮಾತ್ರ ಪಾಲ್ಗೊಳ್ಳಬೇಕು ಹಾಗೂ ಕಟ್ಟುನಿಟ್ಟಿನ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಅಂತ ಡಿ ಸಿ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಸೆಲೂನ್ ಹಾಗೂ ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿ ನೀಡಲಾಗಿದೆ.

TAGGED:chikkaballapurCorona VirusCovid19District Collector R.LatagauribidanurLockdownPublic TVಕೊರೊನಾ ವೈರಸ್ಕೋವಿಡ್ 19ಗೌರಿಬಿದನೂರುಚಿಕ್ಕಬಳ್ಳಾಪುರಜಿಲ್ಲಾಧಿಕಾರಿ ಆರ್.ಲತಾಪಬ್ಲಿಕ್ ಟಿವಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
3 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
3 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
3 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?