– ಕಂಟೈನ್ಮೆಂಟ್ ಝೋನ್‍ನಲ್ಲಿ ಎಲ್ಲವೂ ಬಂದ್
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಇಂದಿನಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಸಿಗಲಿದೆ.
ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲವಾಗಿದ್ದು, ಒಂದೂವರೆ ತಿಂಗಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್ ಆಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತು ಪಡಿಸಿ ಉಳಿದ ಕಡೆ ರಿಲೀಫ್ ಸಿಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಬಿಟ್ಟು ಉಳಿದೆಡೆ ಅಗತ್ಯ ಸೇವೆಗಳು ಲಭ್ಯ ವಾಗಲಿದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.
Advertisement
Advertisement
ಮೂರು ವಲಯಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಹಾಗಾದ್ರೆ ಇಂದಿನಿಂದ ಏನಿರುತ್ತೆ..? ಏನಿರಲ್ಲ..? ಎಂಬುದರ ಕುರಿತು ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ.
Advertisement
ಇಂದಿನಿಂದ ಏನಿರುತ್ತೆ..?
ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಉಳಿದ ಕಡೆ ಮದ್ಯದಂಗಡಿ ಓಪನ್ ಆಗಲಿದೆ. ಪಾನ್, ಗುಟ್ಕಾ, ಸಿಗರೇಟ್, ಬೀಡಿ ಮಾರಾಟಕ್ಕೆ ಹಾಗೂ ಮದುವೆ, ಶುಭ ಸಮಾರಂಭಗಳಿಗೆ ಅವಕಾಶ (ಗರಿಷ್ಠ 50 ಮಂದಿ) ಅವಕಾಶ ಮಾಡಿಕೊಡಲಾಗಿದೆ.
Advertisement
ಅಂತ್ಯಕ್ರಿಯೆಯಲ್ಲಿ 20 ಜನ ಪಾಲ್ಗೊಳ್ಳಬಹುದು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಕಡ್ಡಾಯ ಮಾಡಲಾಗಿದೆ. ಅಲ್ಲದೆ ಕೆಲಸದ ಸ್ಥಳಗಳಲ್ಲಿ ಆರೋಗ್ಯ ಸೇತು ಆ್ಯಪ್ ಬಳಕೆ ಕಡ್ಡಾಯವಾಗಿದೆ.
ಏನಿರಲ್ಲ..?
ರೈಲು, ಮೆಟ್ರೋ, ವಿಮಾನ ಸಂಚಾರ ಇರಲ್ಲ. ಅಂತರ್ ರಾಜ್ಯಗಳ ನಡುವೆ ಬಸ್ ಸಂಚಾರ ಇರಲ್ಲ. ಶಾಲೆ ಕಾಲೇಜು, ದೇಗುಲ, ಆತಿಥ್ಯ ಸೇವೆ ಇರಲ್ಲ. ಥಿಯೇಟರ್, ಶಾಪಿಂಗ್ ಮಾಲ್, ಜಿಮ್, ಈಜುಕೊಳ ಇರಲ್ಲ. ಸಾರ್ವಜನಿಕ ಸಭೆ, ಸಮಾರಂಭ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆ ನಿಷೇಧ ಮಾಡಲಾಗಿದೆ. ಸಾರ್ವಜನಿಕ ಶೌಚಾಲಯ ಬಳಕೆಗೆ ಅವಕಾಶವಿಲ್ಲ.