Connect with us

Karnataka

ಕೊಡಗಿನಲ್ಲಿ ಜುಲೈ 5ರವರೆಗೆ ಲಾಕ್‍ಡೌನ್- ಪ್ರವಾಸೋದ್ಯಮಕ್ಕೆ ಅವಕಾಶ ಇಲ್ಲ

Published

on

Share this

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇಂದಿಗೂ ಲಾಕ್‍ಡೌನ್ ಜಾರಿಯಲ್ಲಿದ್ದು, ಆದರೂ ಹೊರ ಜಿಲ್ಲೆಗಳಿಂದ ಸಾಕಷ್ಟು ಜನ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಜುಲೈ 5ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಅನ್‍ಲಾಕ್ ಅಗಿರುವ ಜಿಲ್ಲೆಗಳಿಂದ ಕೊಡಗು ಜಿಲ್ಲೆಗೆ ಪ್ರವಾಸಿಗರು ಎಂಟ್ರಿ ಕೊಡುತ್ತಿದ್ದಾರೆ. ಜುಲೈ 5ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿದ್ದು, ಈ ದಿನಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಅವಕಾಶ ಇಲ್ಲ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಹಾಗೂ ಉಪವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು ಹೇಳಿದ್ದಾರೆ.

ಜಿಲ್ಲೆಯಲ್ಲಿ ಲಾಕ್‍ಡೌನ್ ದಿನಗಳಲ್ಲಿಯೂ ಪ್ರವಾಸಿಗರು ಜಿಲ್ಲೆಗೆ ಬರುತ್ತಿರುವ ದೂರುಗಳು ಬಂದಿದೆ. ಜುಲೈ 5ರ ವರೆಗೆ ಜಿಲ್ಲೆಯಲ್ಲಿ ಲಾಕ್‍ಡೌನ್ ಇರುತ್ತದೆ. ಅಲ್ಲಿಯವರೆಗೆ ಕೊಡಗಿನಲ್ಲಿ ಯಾವುದೇ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಇಲ್ಲ. ಜಿಲ್ಲೆಯಲ್ಲಿನ ಹೋಮ್ ಸ್ಟೇ, ರೆಸಾರ್ಟ್, ಲಾಡ್ಜ್ ಗಳಲ್ಲಿ ಪ್ರವಾಸಿಗರಿಗೆ ಅವಕಾಶ ನೀಡಿದ ದೂರುಗಳು ಇದ್ದಲ್ಲಿ ಜಿಲ್ಲಾಡಳಿತದ ಸಹಾಯವಾಣಿ ಸಂಖ್ಯೆ 1077ಗೆ ಕರೆ ಮಾಡಿ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಪೊಲೀಸ್, ಕಂದಾಯ ಇಲಾಖೆ ಅಧಿಕಾರಿಗಳ ಕಾರ್ಯಪಡೆ ರಚಿಸಿದ್ದೇವೆ. ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ 3 ಹೋಮ್ ಸ್ಟೇ ಮೇಲೆ ದಾಳಿ ಮಾಡಿ ಎಫ್‍ಐಆರ್ ದಾಖಲಿಸಿದ್ದೇವೆ. 1 ರೆಸಾಟ್9 ಮೇಲೂ ದೂರು ಬಂದಿದೆ, ಪರಿಶೀಲಿಸುತ್ತೇವೆ. ಇಂದು ಕೂಡ ಪ್ರವಾಸಿಗರಿಗೆ ಅವಕಾಶ ನೀಡಿದ ಮಡಿಕೇರಿಯ ಹೋಮ್ ಸ್ಟೇ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹೊರ ಜಿಲ್ಲೆಯಿಂದ ಬರುವ ಪ್ರವಾಸಿಗರಿಗೆ ಕೊಡಗು ಜಿಲ್ಲೆಯಲ್ಲಿ ಎಂಟ್ರಿ ಇಲ್ಲ. ಅಷ್ಟೇ ಅಲ್ಲದೆ ಈಗಾಗಲೇ ಜಿಲ್ಲೆಗೆ ಅಗಮಿಸುತ್ತಿರುವ ಪ್ರವಾಸಿಗರ ಮೇಲೆ ನಿಗಾ ಇಡಲು ಕಾರ್ಯಪಡೆ ಸನ್ನದ್ಧವಾಗಿದೆ. ಹೊರಜಿಲ್ಲೆಗಳಿಂದ ಜಿಲ್ಲೆಗೆ ಪ್ರವಾಸಿಗರ ಎಂಟ್ರಿ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಲಾಕ್‍ಡೌನ್ ಸಮಯದಲ್ಲಿ ಪ್ರವಾಸಿಗರಿಗೆ ಆಶ್ರಯ ನೀಡಿದಲ್ಲಿ ಹೋಮ್ ಸ್ಟೇ ಗಳ ವಿರುದ್ಧ ಸಹ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೇ ಲೈಸೆನ್ಸ್ ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

Click to comment

Leave a Reply

Your email address will not be published. Required fields are marked *

Advertisement