ಗದಗ: ಕೊರೊನಾ ವೈರಸ್ ನಿಯಂತ್ರಿಸಲು ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದ್ದು, ಮನೆಯಲ್ಲೇ ಇರುವಂತೆ ಹೇಳಿದರೂ ಕೆಲ ಯುವಕರು ಪುಂಡಾಟ ಮೆರೆಯುತ್ತಿದ್ದಾರೆ. ಬೆಟ್ಟದಂತಹ ಪ್ರದೇಶದಲ್ಲಿ ಗುಂಪು ಸೇರಿ ಜೂಜಾಟ ಆಡುತ್ತಿದ್ದಾರೆ.
ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಯುವಕರು ಜೂಜಾಟ ಆಡಲು ಬೆಟ್ಟದ ಬಳಿ ತೆರಳುತ್ತಿದ್ದು, ಬೆಟ್ಟದ ಮೇಲಿರುವ ಐತಿಹಾಸಿಕ ಕೋಟೆ ಭಾಗದಲ್ಲಿ ಯುವಕರ ದಂಡು ಜೂಜಾಟ ಆಡುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹ ಈ ಜೂಜಾಟದಲ್ಲಿ ತೊಡಗಿಕೊಂಡಿದ್ದಾರೆ. ಗಜೇಂಡ್ರಗಡ ನಗರದ ಸುತ್ತಮುತ್ತ ಅನೇಕ ಕಡೆಗಳಲ್ಲಿ ಅವ್ಯಾಹತವಾಗಿ ಈ ದಂಧೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ.
Advertisement
Advertisement
ಈ ಕುರಿತು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಬೆಟ್ಟದ ಮೇಲಿನ ಐತಿಹಾಸಿಕ ಕೋಟೆ ಭಾಗದ ಮಂಟಪ, ದ್ವಾರಬಾಗಿಲು, ಸಿಂಹಹೊಂಡ, ಮದ್ದಿನ ಕೋಣೆ, ಸರಸ್ವತಿ ಕೊಳ್ಳ ಸೇರಿದಂತೆ ಅನೇಕ ಕಡೆಗಳಲ್ಲಿ ಜೂಜಾಟವಾಡುತ್ತಿದ್ದಾರೆ. ಯಾರಾದರೂ ಬಂದರೆ ಎಸ್ಕೇಪ್ ಆಗಲು ಸರಳ ಮಾರ್ಗಕ್ಕೊಸ್ಕರ ಬೆಟ್ಟದ ಮೇಲೆ ಜೂಜಾಟವಾಡಲು ಹೊಗುತ್ತಿದ್ದಾರೆ ಎನ್ನಲಾಗುತ್ತಿದೆ. ಇದರಿಂದ ಅನೇಕ ಕುಟುಂಬಗಳು ಹಾಳಾಗುತ್ತಿದ್ದು, ಯುವಕರು ದುಷ್ಟಚಟಗಳಿಗೆ ಬಲಿಯಾಗುತ್ತಿದ್ದಾರೆ.