ಬೆಂಗಳೂರು: ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದು, ಆರೋಪಿಯ ಸೂಸೈಡ್ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗುತ್ತಿದೆ.
ಸತೀಶ್ ಮಂಜು ಆತ್ಮಹತ್ಯೆಗೆ ಶರಣಾದ ಆರೋಪಿ. ಕಳ್ಳತನ ಪ್ರಕರಣವೊಂದರಲ್ಲಿ ಅಮೃತಹಳ್ಳಿ ಠಾಣೆಯ ಪೊಲೀಸರು ಈತನನ್ನು ಬಂಧಿಸಿದ್ದರು. ಬಳಿಕ ಕಳ್ಳತನ ಪ್ರಕರಣದ ಹೆಚ್ಚಿನ ತನಿಖೆಗೆ ಠಾಣೆಯ ಎರಡನೇ ಮಹಡಿಗೆ ಆರೋಪಿ ಸತೀಶ್‍ನನ್ನ ಪೊಲೀಸರು ಕರೆದುಕೊಂಡು ಹೋಗುತ್ತಿದ್ದರು. ಆದರೆ ಸತೀಶ್ ಮಂಜು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
Advertisement
Advertisement
ಆರೋಪಿಯನ್ನ ತನಿಖೆ ಮಾಡುತ್ತಿದ್ದಾಗ ಆತ ಮೇಲಿಂದ ಜಂಪ್ ಮಾಡಿದ್ದಾನೆಂದು ಈಶಾನ್ಯ ವಿಭಾಗದ ಡಿಸಿಪಿ ಹೇಳುತ್ತಿದ್ದಾರೆ. ಆದರೆ ಸತೀಶ್ ಆತ್ಮಹತ್ಯೆ ಸುತ್ತ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಇದೀಗ ಸಿಐಡಿ ಡಿವೈಎಸ್‍ಪಿ ಜಗನ್ನಾಥ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿದೆ.
Advertisement
ಶುಕ್ರವಾರ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಸ್ಥಳದ ಮಹಜರ್ ಮಾಡಲಾಗಿದ್ದು, ಅಮೃತಹಳ್ಳಿ ಠಾಣೆಗೆ ಎಸಿಪಿ ಹಾಗೂ ಎಲ್ಲ ಠಾಣೆಯ ಇನ್ಸ್ ಪೆಕ್ಟರ್ ಗಳು ಮತ್ತು ಸಿಬ್ಬಂದಿಗಳನ್ನೂ ಕರೆಸಿ ವಿಚಾರಣೆ ಮಾಡಲಾಗಿದೆ. ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಮೃತನ ಮರಣೋತ್ತರ ಪರೀಕ್ಷೆ ಕೂಡ ಮಾಡಲಾಗಿದೆ. ಈ ಎಲ್ಲ ತನಿಖೆಯ ಸಂಪೂರ್ಣ ಚಿತ್ರೀಕರಣ ಮಾಡಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv