ತಮಿಳುನಾಡು (Tamil Nadu) ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಇಂದು ಮತದಾನ ನಡೆದದೆ. ಇದು ಮೊದಲ ಹಂತದ ಮತದಾನವಾಗಿದ್ದು, ಆಸಕ್ತಿಯಿಂದ ಅನೇಕರು ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು. ನಟ ಮತ್ತು ಎಂಎನ್‌ಎಂ ಮುಖ್ಯಸ್ಥ ಕಮಲ್ ಹಾಸನ್ ಕೂಡ ಮತದಾನ ಮಾಡಿ ಮಾದರಿಯಾಗಿದ್ದು, ಚೆನ್ನೈನ ಕೊಯಾಂಬೆಡುವಿನ ಮತಗಟ್ಟೆಯಲ್ಲಿ ಅವರು ಮತದಾನ ಮಾಡಿದ್ದಾರೆ.
Advertisement
ಸದ್ಯ ಕಮಲ್ ರಾಜಕಾರಣದಲ್ಲಿ ಬ್ಯುಸಿಯಾಗಿದ್ದು, ಊಳಿಗಮಾನ್ಯ ರಾಜಕೀಯ ಬಿಟ್ಟು ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾವುದೇ ರಾಜಕೀಯ ಮೈತ್ರಿಯನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಮಕ್ಕಳ್ ನೀಧಿ ಮೈಯಂ (MNM) ಸಂಸ್ಥಾಪಕ, ನಟ ಕಮಲ್ ಹಾಸನ್ (Kamal Haasan) ತಿಳಿಸಿದ್ದಾರೆ.
Advertisement
Advertisement
ಚೆನ್ನೈನಲ್ಲಿ (Chennai) ಎಂಎನ್‌ಎಂನ 7ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ತಮ್ಮ ಪಕ್ಷವು ಇಂಡಿಯಾ ಒಕ್ಕೂಟದ ಭಾಗವಾಗುತ್ತಾ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಪಕ್ಷ ಇನ್ನೂ ಇಂಡಿಯಾ ಬ್ಲಾಕ್‌ಗೆ ಸೇರಿಲ್ಲ. ಪಕ್ಷ ರಾಜಕೀಯವನ್ನು ಸಮಾಧಿ ಮಾಡಿ ರಾಷ್ಟ್ರದ ಬಗ್ಗೆ ಯೋಚಿಸಬೇಕು ಎಂದು ನಾನು ಈಗಾಗಲೇ ಹೇಳಿದ್ದೇನೆ. ರಾಷ್ಟ್ರದ ಬಗ್ಗೆ ನಿಸ್ವಾರ್ಥವಾಗಿ ಯೋಚಿಸುವ ಯಾರಿಗೇ ಆಗಲಿ ನನ್ನ ಪಕ್ಷ ಬೆಂಬಲಿಸುತ್ತದೆ. ಆದರೆ ಸ್ಥಳೀಯ, ಊಳಿಗಮಾನ್ಯ ರಾಜಕೀಯವನ್ನು ಮುಂದುವರಿಸಿದರೆ ನಾವು ಅದರ ಭಾಗವಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.