ರಾಯ್‌ಪುರ: ಜೀವಂತ ಇದ್ದಾಗ ಕಾಂಗ್ರೆಸ್ (Congress) ಜನರನ್ನು ಲೂಟಿ ಮಾಡಿತ್ತು. ಈಗ ವ್ಯಕ್ತಿ ಮೃತಪಟ್ಟ ಬಳಿಕ ಆತನ ಆಸ್ತಿಯನ್ನು ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್ ಲೂಟಿಗೆ ಇಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಕಿಡಿಕಾರಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖವಾದ ಸಂಪತ್ತಿನ ಮರುಹಂಚಿಕೆ (Wealth Redistribution) ಸಂಬಂಧ ಚರ್ಚೆ ನಡೆಯುತ್ತಿರುವಾಗಲೇ ಸ್ಯಾಮ್ ಪಿತ್ರೋಡಾ (Sam Pitroda) ಅವರು ಅಮೆರಿಕ ಮಾದರಿಯ ಪಿತ್ರಾರ್ಜಿತ ತೆರಿಗೆಯನ್ನು ಪ್ರತಿಪಾದಿಸಿದ ಬೆನ್ನಲ್ಲೇ ಮೋದಿ ಆಕ್ರೋಶ ಹೊರಹಾಕಿದ್ದಾರೆ.
Advertisement
Advertisement
ಛತ್ತೀಸ್‌ಗಢದ ಸುರ್ಗುಜಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಎಂದಿಗೂ ಹೆಚ್ಚಿನ ತೆರಿಗೆಗಳನ್ನು ವಿಧಿಸುವ ಮೂಲಕ ತನ್ನ ಖಜಾನೆಯನ್ನು ತುಂಬಲು ಬಯಸುತ್ತದೆ. ಜನರು ತಮ್ಮ ಕಷ್ಟಪಟ್ಟು ಸಂಪಾದಿಸಿದ ಸಂಪತ್ತನ್ನು ತಮ್ಮ ಮಕ್ಕಳಿಗೆ ವರ್ಗಾಯಿಸಲು ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಪಿತ್ರೋಡಾ ಹೇಳಿಕೆ ಪಕ್ಷದ ಹೇಳಿಕೆಯಲ್ಲ- ಅಂತರ ಕಾಯ್ದುಕೊಂಡ ಕಾಂಗ್ರೆಸ್
Advertisement
‘ರಾಜಕುಮಾರ’ ಮತ್ತು ರಾಜಕುಟುಂಬದ ಸಲಹೆಗಾರರು ಮಧ್ಯಮ ವರ್ಗದ ಮೇಲೆ ಹೆಚ್ಚಿನ ತೆರಿಗೆಗಳನ್ನು ವಿಧಿಸಬೇಕೆಂದು ಹೇಳಿದ್ದಾರೆ. ಇದು ಪೋಷಕರಿಂದ ಪಡೆದ ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆಯನ್ನು ವಿಧಿಸುತ್ತದೆ. ನಿಮ್ಮ ದುಡಿಮೆಯಿಂದ ನೀವು ಕೂಡಿಟ್ಟ ಸಂಪತ್ತನ್ನು ನಿಮ್ಮ ಮಕ್ಕಳಿಗೆ ಸಿಗುವುದಿಲ್ಲ, ಬದಲಿಗೆ ಕಾಂಗ್ರೆಸ್‌ನ ಉಗುರುಗಳು ನಿಮ್ಮಿಂದ ಕಿತ್ತುಕೊಳ್ಳುತ್ತವೆ. ಜೀವಂತ ಇದ್ದಾಗಲೂ, ಸಾವಿನ ನಂತರವೂ ಲೂಟಿ ಮಾಡುವುದೇ ಕಾಂಗ್ರೆಸ್ ಮಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.
Advertisement
ಸ್ಯಾಮ್ ಪಿತ್ರೋಡಾ ಹೇಳಿದ್ದೇನು?
ವ್ಯಕ್ತಿಯೊಬ್ಬ 100 ಮಿಲಿಯನ್ ಡಾಲರ್ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗುತ್ತದೆ. 55% ಸಂಪತ್ತು ಸರ್ಕಾರಕ್ಕೆ ಹೋಗುತ್ತದೆ. ಇದೊಂದು ಆಸಕ್ತಿದಾಯಕ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಯಾರಾದರೂ 10 ಶತಕೋಟಿ ಮೌಲ್ಯದವರು ಮೃತಪಟ್ಟರೆ ಅವರ ಮಕ್ಕಳು 10 ಶತಕೋಟಿ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ರೀತಿಯ ವಿಷಯಗಳ ಬಗ್ಗೆ ಜನರು ಚರ್ಚಿಸಬೇಕು. ಕಾಂಗ್ರೆಸ್ ಪಕ್ಷವು ಸಂಪತ್ತಿನ ಹಂಚಿಕೆಯನ್ನು ಉತ್ತಮಗೊಳಿಸುವ ನೀತಿಯನ್ನು ರೂಪಿಸುತ್ತದೆ ಎಂದಿದ್ದರು. ಇದನ್ನೂ ಓದಿ: 10 ವರ್ಷಗಳಲ್ಲಿ ದೇಶದ ಚಿತ್ರಣವನ್ನೇ ಮೋದಿ ಬದಲಾಯಿಸಿದ್ರು: ಯೋಗಿ
ಈ ಹೇಳಿಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪಿತ್ರೋಡಾ ಕಾಂಗ್ರೆಸ್ ಪ್ರಣಾಳಿಕೆಯ ಬಗ್ಗೆ ಪ್ರಧಾನಿಯವರು ಹರಡುತ್ತಿರುವ ಸುಳ್ಳುಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಒಬ್ಬ ವ್ಯಕ್ತಿಯಾಗಿ ನಾನು ಅಮೇರಿಕಾದಲ್ಲಿ ಪಿತ್ರಾರ್ಜಿತ ತೆರಿಗೆಯ ಕುರಿತು ಹೇಳಿದ್ದನ್ನು ಮಾಧ್ಯಮಗಳು ತಿರುಚಿರುವುದು ದುರದೃಷ್ಟಕರ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.