ಬೆಂಗಳೂರು: ಲೋಕಸಭೆ ಚುನಾವಣೆಗೆ (Lok Sabha Election) ಬಿಜೆಪಿ ಭರ್ಜರಿ ತಾಲೀಮು ನಡೆಸುತ್ತಿದ್ದು ಬೆಂಗಳೂರಿನ ರೆಸಾರ್ಟ್‌ನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (Arun Singh) ನೇತೃತ್ವದಲ್ಲಿ ಸಭೆ ನಡೆದಿದೆ.
8-9 ಲೋಕಸಭಾ ಕ್ಷೇತ್ರಗಳಲ್ಲಿ (Lok Sabha) ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಮಾಡಲಾಗಿದೆ. ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ತುಮಕೂರು, ವಿಜಯಪುರ, ಬೆಳಗಾವಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾವೇರಿ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಪರ್ಯಾಯ ಅಭ್ಯರ್ಥಿ ಹುಡುಕುವ ಬಗ್ಗೆ ಚರ್ಚೆ ಆಗಿದೆ. ಇದನ್ನೂ ಓದಿ: ದೇವೇಗೌಡರ ಮೂಲಕ ಟಿಕೆಟ್ ಲಾಬಿ – ಬಿಜೆಪಿ ನಾಯಕರ ಭೇಟಿ ರಹಸ್ಯ ಏನು?
Advertisement
Advertisement
ಬೆಂಗಳೂರು ಗ್ರಾಮಾಂತರದಲ್ಲಿ (Bengaluru Rural) ಸ್ಪರ್ಧೆಗೆ ಮಾಜಿ ಸಚಿವ ಸಿಪಿ ಯೋಗೇಶ್ವರ್ (CP Yogeshwar) ನಿರಾಸಕ್ತಿ ತೋರಿದ್ದು ಬಿಜೆಪಿ ನಾಯಕರನ್ನು ಸಂಕಷ್ಟಕ್ಕೆ ಸಿಲುಕಿದೆ. ಇನ್ನೂ ಸಮಯ ಇದೆ. ಯೋಚಿಸಿ ಅಭಿಪ್ರಾಯ ತಿಳಿಸುವಂತೆ ಸಿಪಿವೈಗೆ ಅರುಣ್ ಸಿಂಗ್ ಮತ್ತು ಪ್ರಹ್ಲಾದ್ ಜೋಶಿ ಸೂಚಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
Advertisement
ಇನ್ನೂ ಸಭೆಯಲ್ಲಿಸದಾನಂದ ಗೌಡ ಹಾಜರಿದ್ದರೂ ಸ್ಪರ್ಧೆ ಬಗ್ಗೆ ಯಾವುದೇ ಸ್ಪಷ್ಟತೆ ನೀಡಿಲ್ಲ ಎನ್ನಲಾಗಿದೆ. ಈಶ್ವರಪ್ಪ ಮಗನಿಗೆ ಟಿಕೆಟ್ ಬೇಕೆಂಬ ಬೇಡಿಕೆ ಮುಂದಿಟ್ಟಿದ್ದಾರೆ. ಆದರೆ ಸವಾಲಿರುವ ಕ್ಷೇತ್ರಗಳ ವಸ್ತು ಸ್ಥಿತಿಯನ್ನು ಹೈಕಮಾಂಡ್‌ಗೆ ವಿವರಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದನ್ನೂ ಓದಿ: ನಾವು ರಾಮ ಭಕ್ತರೇ, ಬಾಗಿಲು ತೆಗೆಸಿದ್ದೇ ನಾವು – ಕಾಂಗ್ರೆಸ್‌ನಿಂದ ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿ ರಿಲೀಸ್
Advertisement