ನವದೆಹಲಿ: ಟಿ20 ವಿಶ್ವಕಪ್ (T20 World Cup 2024) ಗೆದ್ದ ಟೀಂ ಇಂಡಿಯಾ ಕ್ರಿಕೆಟ್ ತಂಡಕ್ಕೆ (Team India) ಲೋಕಸಭೆ ಅಭಿನಂದನೆ ಸಲ್ಲಿಸಿದೆ. ಈ ವೇಳೆ ದೇಶದ ಯುವಕರು ಮತ್ತು ಕ್ರೀಡಾ ಪಟುಗಳು ಈ ಗೆಲುವಿನಿಂದ ಸ್ಫೂರ್ತಿ ಪಡೆಯುತ್ತಾರೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.
ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್‍ಗಳಿಂದ ಸೋಲಿಸಿತ್ತು. ಈ ಮುಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್‍ನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು
17 ವರ್ಷಗಳ ಬಳಿಕ ಟೀಂ ಇಂಡಿಯಾ ಮತ್ತೆ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿದೆ. ಈ ಟೂರ್ನಿಯುದ್ದಕ್ಕೂ ಟೀಂ ಇಂಡಿಯಾ ಆಟಗಾರರಿಂದ ಹಲವು ದಾಖಲೆಗಳು ನಿರ್ಮಾಣವಾಯಿತು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ನೂತನ ದಾಖಲೆಗಳನ್ನು ಬರೆದರು.
ಇದಕ್ಕೂ ಮುನ್ನ ಟೀಂ ಇಂಡಿಯಾ 2007ರ ಉದ್ಘಾಟನಾ ಆವೃತ್ತಿಯಲ್ಲೇ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಅಲ್ಲದೇ 2011ರ ಏಕದಿನ ವಿಶ್ವಕಪ್ ಸಹ ಗೆದ್ದುಕೊಂಡಿತ್ತು. ಈ ಎರಡೂ ಟೂರ್ನಿಯಲ್ಲೂ ಎಂ.ಎಸ್ ಧೋನಿಯವರೇ ನಾಯಕತ್ವ ವಹಿಸಿದ್ದು ವಿಶೇಷ.
ಟಿ20 ವಿಶ್ವಕಪ್ ಟೂರ್ನಿ ಬಳಿಕ 2024ರ ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಬಳಗಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬರೋಬ್ಬರಿ 125 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಇದನ್ನೂ ಓದಿ: ಅಂಗಳದಲ್ಲಿ ನಾನು ಮಲಗಿದ್ದು ಯಾಕೆ – ಕೊನೆಗೂ ರಿವೀಲ್ ಮಾಡಿದ ರೋಹಿತ್ ಶರ್ಮಾ