ಬೆಂಗಳೂರು: ದಕ್ಷಿಣ ಕನ್ನಡದಲ್ಲಿ (Dakshina Kannada) ಬಿಜೆಪಿಗೆ (BJP) ಇದ್ದ ಆತಂಕ ದೂರವಾಗಿದ್ದು ಪುತ್ತಿಲ ಪರಿವಾರ (Puthila Parivara) ಮೋದಿ ಪರಿವಾರದ (Modi Parivara) ಜೊತೆ ವಿಲೀನಗೊಂಡಿದ್ದು, ಕ್ಯಾ. ಬ್ರಿಜೇಶ್ ಚೌಟ ಅವರನ್ನು ಬೆಂಬಲಿಸಲು ನಿರ್ಧಾರ ತೆಗೆದುಕೊಂಡಿದೆ.
ಗುರುವಾರ ರಾತ್ರಿ ಯಡಿಯೂರಪ್ಪನವರ ನಿವಾಸದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರ ಸಮ್ಮುಖದಲ್ಲಿ ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಸೇರ್ಪಡೆಯಾದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ 2 ರೂ. ಇಳಿಕೆ
Advertisement
Advertisement
ಕಾರ್ಕಳ ಶಾಸಕ ಸುನಿಲ್ ಕುಮಾರ್ (Sunil Kumar) ಮಾತನಾಡಿ, ಅರುಣ್ ಕುಮಾರ್ ಪುತ್ತಿಲ ಭಿನ್ನಾಭಿಪ್ರಾಯದಿಂದ ದೂರವಾಗಿದ್ದರು. ಬಿಜೆಪಿ ಸೇರ್ಪಡೆಯಾಗಿ ದಕ್ಷಿಣ ಕನ್ನಡ ಚುನಾವಣೆಯಲ್ಲಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ. ಪುತ್ತಿಲ ಪರಿವಾರ ಮೋದಿ ಪರಿವಾರಕ್ಕೆ ಸೇರುತ್ತಿದೆ ಎಂದು ತಿಳಿಸಿದರು.
Advertisement
ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಈ ರಾಷ್ಟ್ರದ ಗೌರವವನ್ನ ಎತ್ತರಕ್ಕೆ ತೆಗೆದುಕೊಂಡು ಹೋಗುತ್ತಿರುವ ಮೋದಿಯವರ (Narendra Modi) ಜೊತೆ ಕೈ ಜೋಡಿಸಬೇಕು. ಪುತ್ತಿಲ ಪರಿವಾರ ಮೋದಿ ಪರಿವಾರ ಜೊತೆಯಾಗಿ ಕೆಲಸ ಮಾಡುತ್ತದೆ. ದಕ್ಷಿಣ ಕನ್ನಡದ ಅಭ್ಯರ್ಥಿಯನ್ನ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
Advertisement
ಪಕ್ಷದಲ್ಲಿ ಬಂಡಾಯ ಹಿನ್ನೆಲೆಯಲ್ಲಿ ರಾಷ್ಟ್ರ ನಾಯಕರು ರಾಜ್ಯ ನಾಯಕರು ಸಂಪರ್ಕದಲ್ಲಿದ್ದಾರೆ. ನ್ನೆರಡು ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ರಾಷ್ಟ್ರ ನಾಯಕರು ಮಾಡುತ್ತಾರೆ ಎಂದು ಹೇಳಿದರು.