ನವದೆಹಲಿ: ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಮೈಸೂರಿನಿಂದ ಯದುವೀರ್ ಒಡೆಯರ್, ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್, ಹಾವೇರಿಯಿಂದ ಮಾಜಿ ಸಿಎಂ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಲಾಗಿದೆ.
ಪಬ್ಲಿಕ್ ಟಿವಿ ವರದಿ ಮಾಡಿದಂತೆ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ತಪ್ಪಿದೆ. ಉಡುಪಿ ಚಿಕ್ಕಮಗಳೂರಿನ ಸಂಸದೆಯಾಗಿದ್ದ ಶೋಭಾ ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಟಿಕೆಟ್ ಸಿಕ್ಕಿದರೆ, ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ನೀಡಲಾಗಿದೆ.
Advertisement
Advertisement
ದಕ್ಷಿಣ ಕನ್ನಡದ ಸಂಸದ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬದಲು ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಸಿಕ್ಕಿದೆ. ಮತ್ತೆ ಕೊಪ್ಪಳ ಟಿಕೆಟ್ ನಿರೀಕ್ಷೆಯಲ್ಲಿದ್ದ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ಕೈ ತಪ್ಪಿದ್ದು ಬಸವರಾಜ್ ಕ್ಯಾವತೂರು ಅವರಿಗೆ ಸಿಕ್ಕಿದೆ.
Advertisement
ದಾವಣಗೆರೆಯಲ್ಲಿ ಗಾಯತ್ರಿ ಸಿದ್ದೇಶ್ವರ, ಚಾಮರಾಜನಗರದಲ್ಲಿ ಎಸ್ ಬಾಲರಾಜ್ ಅವರಿಗೆ ಟಿಕೆಟ್ ಸಿಕ್ಕಿದೆ. ಬೆಳಗಾವಿ, ಉತ್ತರ ಕನ್ನಡ, ಕೋಲಾರ, ಚಿತ್ರದುರ್ಗ, ರಾಯಚೂರು, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ.
Advertisement
ಯಾರಿಗೆ ಎಲ್ಲಿ?
ಚಿಕ್ಕೋಡಿ – ಅಣ್ಣಾಸಾಹೇಬ್ ಜೊಲ್ಲೆ
ಬಾಗಲಕೋಟೆ: ಗದ್ದಿಗೌಡರ್
ಬಿಜಾಪುರ – ರಮೇಶ್ ಜಿಗಜಿಣಗಿ
ಕಲಬುರಗಿ – ಉಮೇಶ್ ಜಾಧವ್
ಬೀದರ್ – ಭಗವಂತ ಖೂಬಾ
ಕೊಪ್ಪಳ: ಬಸವರಾಜ್ ಕ್ಯಾವತೂರು
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ – ಪ್ರಹ್ಲಾದ್ ಜೋಷಿ
ದಾವಣಗೆರೆ – ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ – ಬಿವೈ ರಾಘವೇಂದ್ರ
ಉಡುಪಿ ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟ
ತುಮಕೂರು – ಸೋಮಣ್ಣ
ಮೈಸೂರು – ಯದುವೀರ್ ಕೃಷ್ಣದತ್ತ ಒಡೆಯರ್
ಚಾಮರಾಜನಗರ – ಎಸ್ ಬಾಲರಾಜ್
ಬೆಂಗಳೂರು ಗ್ರಾಮಾಂತರ- ಸಿಎನ್ ಮಂಜುನಾಥ
ಬೆಂಗಳೂರು ಉತ್ತರ – ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿಸಿ ಮೋಹನ್
ಬೆಂಗಳೂರು ದಕ್ಷಿಣ – ತೇಜಸ್ವಿ ಸೂರ್ಯ