ಬೆಂಗಳೂರು: ನಾನು ಯಾರಿಗೂ ಭಿಕ್ಷೆ ಬೇಡಲ್ಲ. ಸ್ವಾಭಿಮಾನಕ್ಕೆ ಧಕ್ಕೆ ಬರುವಂತೆ ನಡೆದುಕೊಳ್ಳಲ್ಲ. ನನಗೂ ನಮ್ಮ ಕಾರ್ಯಕರ್ತರಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಸಿಎಂ, ತುಮಕೂರು ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಮುದ್ದುಹನುಮೇಗೌಡರ ಬಂಡಾಯ ಸ್ಪರ್ಧೆ ವಿಚಾರವನ್ನು ಕಾಂಗ್ರೆಸ್ ನಾಯಕರಿಗೆ ಕೇಳಿ ಎಂದು ಗರಂ ಆದರು. ಮುದ್ದಹನುಮೇಗೌಡರ ಸ್ಪರ್ಧೆ ವಿಚಾರ ಕಾಂಗ್ರೆಸ್ಸಿಗೆ ಸೇರಿದ್ದು, ನಮಗೆ ಸಂಬಂಧಿಸಿದ್ದಲ್ಲ. ಕಾಂಗ್ರೆಸ್ ನಮಗೆ ಎಂಟು ಕ್ಷೇತ್ರ ನೀಡಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದರು.
Advertisement
Advertisement
ಕಾಂಗ್ರೆಸ್ ನಾಯಕರಿಗೆ ಮೈತ್ರಿ ವಿಚಾರವಾಗಿ ಈಗಾಗಲೇ ಮಂಡ್ಯದಲ್ಲಿ ಹೇಳಿದ್ದೇನೆ. ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ಕಾಂಗ್ರೆಸ್‍ನವರು ಅವರ ಕೆಲಸ ಮಾಡಲಿ. ನಮಗೂ ಶಕ್ತಿ ಇದೆ. ಪಕ್ಷದ ಕಾರ್ಯಕರ್ತರು ನಮ್ಮ ಜೊತೆಗೆ ಇದ್ದಾರೆ ಎಂದು ಹೇಳಿದರು.
Advertisement
ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಕಣಕ್ಕೆ ಇಳಿಯುತ್ತಿದ್ದಾರೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್‍ನ ಹಾಲಿ ಸಂಸದ ಮುದ್ದುಹನುಮೇಗೌಡರ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ. ಇದರಿಂದಾಗಿ ಮೈತ್ರಿ ನಾಕರಿಗೆ ಬಿಗ್ ಶಾಕ್ ಉಂಟಾಗಿದೆ.