– ಅಭ್ಯರ್ಥಿ ನಾನಲ್ಲ, ಸಿಎಂ ಕುಮಾರಸ್ವಾಮಿ, ಡಿಕೆಶಿ
– ವಿಧಿಯಾಟ, ಕಿತ್ತಾಟ ಆಡುವರೆಲ್ಲರೂ ಒಂದಾಗಿದ್ದೇವೆ
ರಾಮನಗರ: ಮಂಡ್ಯದ ಗಂಡು ಮಾಜಿ ಸಚಿವ ಅಂಬರೀಶ್ ವಿಧಿವಶರಾಗಿದ್ದಾರೆ. ಮತ್ತೊಬ್ಬ ಮಂಡ್ಯದ ಗಂಡನ್ನು ತಯಾರು ಮಾಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿಕೊಂಡಿದ್ದಾರೆ.
ರಾಮನಗರದಲ್ಲಿಯೂ ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಿದ ಸಂಸದರು, ನಿಮಗೆ ಮಂಡ್ಯದಲ್ಲಿ ಅನೇಕ ಜನರು ಪರಿಚಯವಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ವೋಟ್ ಹಾಕುವಂತೆ ಎಲ್ಲರಿಗೂ ತಿಳಿಸಿ. ನನ್ನ ಹಾಗೂ ನಿಖಿಲ್ ಪರವಾಗಿ ಕೆಲಸ ಮಾಡಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
Advertisement
Advertisement
ಈ ಚುನಾವಣೆಯನ್ನು ನೀವು ಗಂಭೀರವಾಗಿ ತೆಗೆದುಕೊಳ್ಳಬೇಕು. ಡಿ.ಕೆ.ಸುರೇಶ್ ಗೆಲ್ಲುತ್ತಾರೆ ಬಿಡು ಎಂದು ಸುಮ್ಮನೆ ಇರಬೇಡಿ. ಎಲ್ಲರೂ ಮತದಾನ ಮಾಡಿ ಅಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿ. ರಾಮನಗರದ ಋಣವಿದೆ ಅಂತ ನಿಖಿಲ್ ಕುಮಾರಸ್ವಾಮಿ ಕ್ಷೇತ್ರಕ್ಕೆ ಬಂದು ನನಗೆ ಶಕ್ತಿ ತುಂಬಿದ್ದಾರೆ. ರಾಜ್ಯದಲ್ಲಿ ಹೆಚ್ಚು ಪ್ರಚಾರ ಪಡೆಯುತ್ತಿರುವುದು ಮಂಡ್ಯ ಲೋಕಸಭಾ ಕ್ಷೇತ್ರ. ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವ ಮೂಲಕ ಮುಖ್ಯಮಂತ್ರಿಗಳ ಕೈ ಬಲಪಡಿಸಿ ಎಂದರು.
Advertisement
ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ನಾನಲ್ಲ. ಇಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ಅಭ್ಯರ್ಥಿಗಳಾಗಿದ್ದಾರೆ. ಅವರನ್ನು ಗೆಲ್ಲಿಸುವುದಕ್ಕೆ ನಾನು ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
Advertisement
ಸಂಸದನಾಗಿ ಪ್ರಮಾಣಿಕವಾದ ಸೇವೆ ಮಾಡಿದ್ದೇನೆ. ನನಗೆ ಭಾಷಣ ಮಾಡಿ ಅಭ್ಯಾಸವಿಲ್ಲ. ಕೆಲಸ ಮಾಡಿಯೇ ಅಭ್ಯಾಸ. ನನಗೆ ಮತ್ತೊಮ್ಮೆ ನಿಮ್ಮ ಆಶೀರ್ವಾದ ಬೇಕು. ಅದಕ್ಕಾಗಿ ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದೆ. ಆದರೆ ವಿಧಿಯಾಟ, ಕಿತ್ತಾಟ ಆಡುವರೆಲ್ಲರೂ ಒಂದಾಗಿದ್ದೇವೆ. ರಾಜ್ಯದ ಹಿತದೃಷ್ಟಿಯಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಶೀರ್ವಾದದಿಂದ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ ಎಂದರು.
ಜಾತ್ಯಾತೀತ ಶಕ್ತಿಗಳು ಒಂದಾಗಿ ಬಿಜೆಪಿಯನ್ನು ದೂರ ಇಡುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಯತ್ನ ಮಾಡಿದ್ದರು. ಅದಕ್ಕೆ ಸಿಎಂ ಕುಮಾರಸ್ವಾಮಿ ನೇತೃತ್ವ ವಹಿಸಿ, ಜನರಿಗೆ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ರಾಜ್ಯ ಮೈತ್ರಿ ಸರ್ಕಾರ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.
ರಾಮನಗರ ಜಿಲ್ಲೆಯ ರೈತರ ಕನಸಗಳನ್ನು ನನಸು ಮಾಡುವುದು, ಯುವಕರಿಗೆ ಕೆಲಸ, ಜನರಿಗೆ ಉತ್ತಮ ಆರೋಗ್ಯ ಕೊಡುವುದು ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಗುರಿಯಾಗಿದೆ. ಲೋಕಸಭಾ ಚುನಾವಣೆಯನ್ನು ರಾಜ್ಯದ ಎಲ್ಲಾ ನಾಯಕರು ನೋಡುತ್ತಿದ್ದಾರೆ. ಗೇಲಿ ಮಾಡುವರಿಗೆ ಒಳ್ಳೆಯ ಸಂದೇಶ ಕೊಡಬೇಕು ಎಂದು ಕಾರ್ಯಕರ್ತರನ್ನು ಹುರಿದುಂಬಿಸಿದರು.