ರಾಮನಗರ: ಮತದಾರರಿಗೆ ಹಂಚಲು ಕಾಂಗ್ರೆಸ್ (Congress) ಶಾಸಕರು ಸೀರೆ ಸಂಗ್ರಹಿಸಿರುವ ಆರೋಪ ಹಿನ್ನೆಲೆಯಲ್ಲಿ ಗೋಡೌನ್‌ನಲ್ಲಿದ್ದ ಸೀರೆಗಳನ್ನು (Sarees) ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ.
ರಾಮನಗರದ (Ramangara) ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಖಾಸಗಿ ಗೋದಾಮು ಬಳಿ ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ (BJP) ಮತ್ತು ಜೆಡಿಎಸ್ (JDS) ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Advertisement
Advertisement
ಒಟ್ಟು 14 ಲಕ್ಷ ರೂ. ಮೌಲ್ಯದ 10 ಸಾವಿರಕ್ಕೂ ಅಧಿಕ ಸೀರೆಗಳನ್ನ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮತದಾರರಿಗೆ ಹಂಚುವುದಕ್ಕಾಗಿ ಕಾಂಗ್ರೆಸ್‌ನವರು ವಾಹನದಲ್ಲಿ ಸೀರೆಗಳನ್ನು ತಂದು ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದಾರೆ ಎಂದು ಜೆಡಿಎಸ್ ಕಾಯಕರ್ತರು ಆರೋಪಿಸಿದ್ದಾರೆ. ಇದನ್ನೂ ಓದಿ: IPL 2024: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್ ಪಂತ್ ನಾಯಕ
Advertisement
ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಆಪ್ತನೊಬ್ಬ ಸೀರೆ ಹಂಚುವ ಕೆಲಸ ಮಾಡಿದ್ದಾನೆ. ಎರಡು ವಾಹನಗಳಲ್ಲಿ ಸೀರೆ ಹಂಚಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
Advertisement
ಡಿವೈಎಸ್ಪಿ ದಿನಕರ ಶೆಟ್ಟಿ, ರಾಮನಗರಪುರ ಠಾಣೆ ಪಿಎಸ್ ಐ ಆಕಾಶ್ ಸೇರಿದಂತೆ ಸ್ಥಳೀಯ ಚುನಾವಣಾ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದರು. ಸೀರೆಗಳನ್ನು ಪರಿಶೀಲಿಸಿ ಗೋದಾಮು ಸಿಬ್ಬಂದಿಯಿಂದ ಸೀರೆಗಳನ್ನು ತಂದಿರುವುದಕ್ಕೆ ಸಂಬಂಧಿಸಿದ ರಸೀದಿ ಸೇರಿದಂತೆ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಸ್ಥಳಕ್ಕೆ ಬಂದ ಕೆಲ ಕಾಂಗ್ರೆಸ್ ಕಾರ್ಯಕರ್ತರು ಇದಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧ ಇಲ್ಲ. ಸೀರೆ ಕವರ್ ಮೇಲೆ ಯಾವುದೇ ಸ್ಟಿಕ್ಕರ್, ಪೋಟೊ ಇಲ್ಲ ಸುಖಾಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: RCB Unbox: ‘ಬೆಂಗಳೂರ್’ ಅಲ್ಲ ಇನ್ಮುಂದೆ ಹೇಳಿ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’
ಈ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೆಲಕಾಲ ಗೊಂದಲ ಸೃಷ್ಟಿಯಾಯಿತು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದರು. ಪ್ರಕರಣ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ರಾಮನಗರ ಡಿಸಿ ಅವಿನಾಶ್ ಮೆನನ್ ಹಾಗೂ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.