– ಮಹಾರಾಷ್ಟ್ರದ ಅಭ್ಯರ್ಥಿ ಬಳಿಯಿದೆ ಕೇವಲ 500 ರೂ. ಆಸ್ತಿ
ಬೆಂಗಳೂರು: ಲೋಕಸಭಾ ಚುನಾವಣೆಯ (Lok Sabha Polls) 2ನೇ ಹಂತದ ಮತದಾನ ನಡೆಯುತ್ತಿದೆ. ಕರ್ನಾಟಕ, ಕೇರಳ ಸೇರಿದಂತೆ ಒಟ್ಟು 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಕ್ಷೇತ್ರಗಳಲ್ಲಿ ಮತದಾನ (Voting) ನಡೆಯುತ್ತಿದೆ. ಕರ್ನಾಟಕದ 14 ಕ್ಷೇತ್ರಗಳಿಗಿಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮೇ 7ರಂದು 2ನೇ ಹಂತದ ಮತದಾನ ನಡೆಯಲಿದೆ.
ರಾಜಸ್ಥಾನದಲ್ಲಿ 13, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ (Uttar Pradesh) ತಲಾ 8, ಮಧ್ಯ ಪ್ರದೇಶದಲ್ಲಿ 6, ಅಸ್ಸಾಂ ಮತ್ತು ಬಿಹಾರದಲ್ಲಿ ತಲಾ 5 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಜೊತೆಗೆ ಛತ್ತೀಸ್ಗಢ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ 3 ಸ್ಥಾನಗಳು ಮತ್ತು ಮಣಿಪುರ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ ಒಂದೊಂದು ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
Advertisement
Advertisement
ದೇಶದ 2ನೇ ಹಂತದ ಚುನಾವಣೆಯಲ್ಲಿ ಒಟ್ಟು 89 ಕ್ಷೇತ್ರಗಳಿಗೆ ಮತದಾನ ನಿಗದಿಯಾಗಿತ್ತು. ಆದ್ರೆ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ಮರಣ ಹೊಂದಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಬೇತುಲ್ನಲ್ಲಿ ಮತದಾನ ಮರುನಿಗದಿಪಡಿಲಾಗಿದೆ. ಮೇ 7 ರಂದು 3ನೇ ಹಂತದ ಮತದಾನದ ವೇಳೆ ಬೇತುಲ್ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಇದನ್ನೂ ಓದಿ: ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ
Advertisement
Advertisement
ಅತೀ ಶ್ರೀಮಂತ ಅಭ್ಯರ್ಥಿಗಳು:
ದೇಶದಲ್ಲಿ ನಡೆಯುತ್ತಿರುವ 2ನೇ ಹಂತದ ಚುನಾವಣೆಯಲ್ಲಿ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಅತೀ ಶ್ರೀಮಂತ ಅಭ್ಯರ್ಥಿಯಾಗಿದ್ದಾರೆ. ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಅಖಾಡಕ್ಕಿಳಿದಿರುವ ಸ್ಟಾರ್ ಚಂದ್ರು ತಮ್ಮ ಕುಟುಂಬದ ಆಸ್ತಿ 622 ಕೋಟಿ ರೂ. ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. 593 ಕೋಟಿ ರೂ. ಆಸ್ತಿ ಹೊಂದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ಸುರೇಶ್, 278 ಕೋಟಿ ರೂ. ಆಸ್ತಿ ಹೊಂದಿರುವ ಉತ್ತರ ಪ್ರದೇಶದ ಮಥುರಾ ಕ್ಷೇತ್ರದ ಅಭ್ಯರ್ಥಿ ಹೇಮ ಮಾಲಿನಿ ಹಾಗೂ 232 ಕೋಟಿ ರೂ. ಆಸ್ತಿ ಹೊಂದಿರುವ ಮಧ್ಯಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಸಂಜಯ್ ಶರ್ಮಾ ಕ್ರಮವಾಗಿ 2,3,4ನೇ ಸ್ಥಾನದಲ್ಲಿದ್ದಾರೆ.
ಬಡ ಅಭ್ಯರ್ಥಿಗಳು ಯಾರು?
ಮಹಾರಾಷ್ಟ್ರದ ನಾಂದೇಡ್ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲಕ್ಷ್ಮಣ್ ನಾಗೋರಾವ್ ಪಾಟಿಲ್ ಕೇವಲ 500 ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಕೇರಳದ ಕಾಸರಗೋಡು ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ 1,000 ರೂ. ಮತ್ತು ಮಹಾರಾಷ್ಟ್ರ ಅಮರಾವತಿ ಕ್ಷೇತ್ರದ ಪೃಥ್ವೀಸಾಮ್ರಾಟ್ ಮುಕಿಂದ್ರರಾವ್ ದೀಪವಂಶ ಕೇವಲ 1,400 ರೂ. ಆಸ್ತಿ ಹೊಂದಿರುವುದಾಗಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ 22.34% ಮತದಾನ – ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರಿನಲ್ಲಿ ಭರ್ಜರಿ ಪ್ರತಿಕ್ರಿಯೆ