ಮುಂಬೈ: ಲೋಕಸಭಾ ಚುನಾವಣೆಯ (Lok Sabha Election) ಸಮಯದಲ್ಲಿ ನಟ ಅಮೀರ್ ಖಾನ್ (Aamir Khan) ಅವರ ಡೀಪ್ ಫೇಕ್ (Deep Fake) ವಿಡಿಯೋವನ್ನು ಬಳಸಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ
ಅಮೀರ್ ಖಾನ್ ಅವರ ಅಧಿಕೃತ ವಕ್ತಾರರು ನಿರ್ದಿಷ್ಟ ವಿಡಿಯೋವನ್ನು ನಕಲಿ (Fake) ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಮುಂಬೈ ಪೊಲೀಸ್ ಠಾಣೆಯಲ್ಲಿ (Mumbai Police Station) ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ಭಾರತ ಬಂದರು ನಿರ್ಬಂಧ
Advertisement
Advertisement
ವಿಡಿಯೋದಲ್ಲಿ ಏನಿದೆ?
ಅಮೀರ್ ಖಾನ್ ಈ ಹಿಂದೆ ದೂರದರ್ಶನದಲ್ಲಿ ಸತ್ಯಮೇವ ಜಯತೆ ಕಾರ್ಯಕ್ರಮ ನಡೆಸುತ್ತಿದ್ದರು. ಈ ದೃಶ್ಯವನ್ನು ಇಟ್ಟುಕೊಂಡು ಬಿಜೆಪಿಯನ್ನು ಗುರಿಯಾಗಿಸಿಕೊಂಡು ಡೀಪ್ ಫೇಕ್ ವಿಡಿಯೋವನ್ನು ಹರಿ ಬಿಡಲಾಗಿತ್ತು.
Advertisement
ಅಮೀರ್ ಖಾನ್ ತಮ್ಮ 35 ವರ್ಷಗಳ ವೃತ್ತಿಜೀವನದುದ್ದಕ್ಕೂ ಯಾವುದೇ ರಾಜಕೀಯ ಪಕ್ಷವನ್ನು ಅನುಮೋದಿಸಿಲ್ಲ ಎಂದು ನಾವು ಈ ಮೂಲಕ ಸ್ಪಷ್ಟಪಡಿಸುತ್ತೇವೆ. ಈ ಹಿಂದೆ ಅವರು ಹಿಂದಿನ ಹಲವು ಚುನಾವಣೆಗಳಲ್ಲಿ ಚುನಾವಣಾ ಆಯೋಗದ ಸಾರ್ವಜನಿಕ ಜಾಗೃತಿ ಅಭಿಯಾನಗಳ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸಲು ತಮ್ಮ ಪ್ರಯತ್ನ ನಡೆಸಿದ್ದಾರೆ. ಅಮೀರ್ ಖಾನ್ ಅವರು ಒಂದು ನಿರ್ದಿಷ್ಟ ರಾಜಕೀಯ ಪಕ್ಷವನ್ನು ಪ್ರಚಾರ ಮಾಡುತ್ತಿರುವ ವಿಡಿಯೋ ನೋಡಿ ನಾವು ಗಾಬರಿಯಾಗಿದ್ದೇವೆ. ಇದು ನಕಲಿ ವಿಡಿಯೋವಾಗಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ಅಮೀರ್ ಖಾನ್ ಅವರ ವಕ್ತಾರರು ತಿಳಿಸಿದ್ದಾರೆ.
Advertisement