ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ (JP Nadda), ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra), ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರಿಗೆ ಬೆಂಗಳೂರು ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ನೋಟಿಸ್ ತಲುಪಿದ 7 ದಿನಗಳ ಒಳಗಾಗಿ ಬೆಳಗ್ಗೆ 11 ಗಂಟೆ ವೇಳೆಗೆ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ (High Grounds Police Station) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ನಲ್ಲಿ ಸೂಚಿಸಲಾಗಿದೆ. ಇದನ್ನೂ ಓದಿ: ಜನಾಂಗೀಯ ನಿಂದನೆ ಹೇಳಿಕೆ – ಸ್ಯಾಮ್ ಪಿತ್ರೋಡಾ ತಲೆದಂಡ
ಜನ ಪ್ರತಿನಿಧಿಗಳ ಕಾಯ್ದೆ ಹಾಗೂ ಸೆಕ್ಷನ್ 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ದುಶ್ಚಟವನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿಯಲ್ಲಿ ಮೂವರು ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋಗೆ ಕಾಂಗ್ರೆಸ್ ನಾಯಕ ರಮೇಶ್ ಬಾಬು ಅವರು ಮೇ 4 ರಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ