ಬೆಂಗಳೂರು: ಡಾ.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಗುತ್ತಾರಾ ಹೀಗೊಂದು ಪ್ರಶ್ನೆ ಎದ್ದಿದೆ.
ಕಳೆದ ಕೆಲ ದಿನಗಳಿಂದ ಡಾ. ಮಂಜುನಾಥ್ (Dr.Manjunath) ಲೋಕಸಭೆಗೆ (Lok Sabha) ಇಳಿಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಇಲ್ಲಿಯವರೆಗೂ ಡಾ. ಮಂಜುನಾಥ್ ಅವರು ರಾಜಕೀಯಕ್ಕೆ ಇಳಿಯುವ ಬಗ್ಗೆ ಯಾವುದೇ ಖಚಿತ ಹೇಳಿಕೆ ನೀಡಿಲ್ಲ. ಆದರೆ ಈಗ ಮಂಜುನಾಥ್ ಅವರನ್ನೇ ಕಣಕ್ಕೆ ಇಳಿಸುವ ಬಗ್ಗೆ ಜೆಡಿಎಸ್ ಮುಂದಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ರಷ್ಯಾದ ಡೇಂಜರ್ ಸೇನೆಯಲ್ಲಿದ್ದಾರೆ ಕಲಬುರಗಿಯ ಮೂವರು – ನಮ್ಮನ್ನು ರಕ್ಷಿಸಿ ಎಂದ ಯುವಕರು
Advertisement
Advertisement
ಇಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಪುತ್ರ ನಿಖಿಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಮಂಜುನಾಥ್ ಅವರ ಸ್ಪರ್ಧೆ ಬಗ್ಗೆ ಪ್ರಸ್ತಾಪ ಇಟ್ಟಿದ್ದಾರೆ ಎಂಬ ವಿಚಾರ ಮೂಲಗಳಿಂದ ಬಂದಿದೆ.
Advertisement
ನಗರ, ಗ್ರಾಮೀಣ ಕ್ಷೇತ್ರಗಳನ್ನೊಳಗೊಂಡಿರುವ ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್, ಬಿಜೆಪಿ ಮತಗಳಿಕೆಯ ಲೆಕ್ಕಾಚಾರವನ್ನು ಮುಂದಿಟ್ಟ ಹೆಚ್‌ಡಿಕೆ ಮಂಜುನಾಥ್ ಸ್ಪರ್ಧೆ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮದ್ಯಪಾನ ಮಾಡದಂತೆ ಪೋಷಕರಿಂದ ಬುದ್ದಿವಾದ – ಆತ್ಮಹತ್ಯೆಗೆ ಶರಣಾದ ಪುತ್ರ
Advertisement
ಮಾಜಿ ಪ್ರಧಾನಿ ದೇವೇಗೌಡರಿಂದಲೂ ಈ ಸಂಬಂಧ ಅಭಿಪ್ರಾಯ ಸಂಗ್ರಹ ನಡೆದಿತ್ತು. ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಯೋಗೇಶ್ವರ್ ಕೂಡ ದೊಡ್ಡ ಗೌಡರನ್ನು ಭೇಟಿಯಾಗಿ ಅಭಿಪ್ರಾಯ ಹೇಳಿದ್ದರು.
ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ಮುಖ್ಯಸ್ಥರು ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಮಂಜುನಾಥ್ ರಾಜ್ಯದಲ್ಲೇ ಪರಿಚಿತ ವ್ಯಕ್ತಿತ್ವ ಹೊಂದಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಮೈತ್ರಿಯ ಮತಬ್ಯಾಂಕ್ ಕ್ರೋಢೀಕರಣ ದೃಷ್ಟಿಯಿಂದ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ನಡೆದಿದೆ.