ಬೆಂಗಳೂರು: ಟಿಕೆಟ್ ಸಿಗದೇ ಅಸಮಾಧಾನಗೊಂಡಿರುವ ಕೊಪ್ಪಳ (Koppala) ಬಿಜೆಪಿ ಸಂಸದ ಕರಡಿ ಸಂಗಣ್ಣ (Karadi Sanggana) ಬುಧವಾರ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ
ಕರಡಿ ಸಂಗಣ್ಣ ಅವರ ಓಲೈಸುವಲ್ಲಿ ಬಿಜೆಪಿ (BJP) ವಿಫಲವಾಗಿದ್ದು ಕಾಂಗ್ರೆಸ್ ಕಡೆ ಮುಖಮಾಡಿದ್ದಾರೆ. 2011ರಲ್ಲಿ ಸಂಗಣ್ಣ ಕರಡಿಯನ್ನು ಬಿಜೆಪಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ಸವದಿ ಈಗ ಸಂಗಣ್ಣರನ್ನು ಕಾಂಗ್ರೆಸ್‌ಗೆ ಸೇರಿಸಲು ಮುಖ್ಯ ಪಾತ್ರ ವಹಿಸಿದ್ದಾರೆ. ಇದನ್ನೂ ಓದಿ: ಬಾಬಾ ರಾಮ್‌ದೇವ್‌ಗೆ ಮತ್ತೆ ಸುಪ್ರೀಂ ತಪರಾಕಿ
Advertisement
Advertisement
ಸೋಮವಾರ ರಾತ್ರಿ ಸಂಗಣ್ಣರನ್ನು ಲಕ್ಷ್ಮಣ ಸವದಿ ಭೇಟಿ ಮಾಡಿ ಕಾಂಗ್ರೆಸ್ ಸೇರುವಂತೆ ಆಫರ್ ನೀಡಿದ್ದರು. ಇದಕ್ಕೆ ಸಂಗಣ್ಣ ಕೂಡ ಅಸ್ತು ಎಂದಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ. ಇದು ಕೊಪ್ಪಳ ಕಾಂಗ್ರೆಸ್‌ಗೆ ಹೊಸ ಜೋಶ್ ತಂದಿದೆ.
Advertisement
ಮಂಗಳವಾರ ಬೆಳಗ್ಗೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ (Rajashekar Basavaraj Hitnal) ನಾಮಪತ್ರ ಸಲ್ಲಿಕೆಗೂ ಮುನ್ನ ಸಂಗಣ್ಣ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ
Advertisement
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ತನಗೆ ನೀಡಬೇಕೆಂದು ಕರಡಿ ಸಂಗಣ್ಣ ಬಿಗಿಪಟ್ಟು ಹಿಡಿದಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಅವರ ಹಿರಿಯ ಸೊಸೆ ಮಂಜುಳಾಗೆ ನೀಡಿದ್ದರು. ಆದರೆ ಅವರು ಚುನಾವಣೆಯಲ್ಲಿ ಸೋತಿದ್ದರು. ಈ ಲೋಕಸಭಾ ಚುನಾವಣೆಯಲ್ಲೂ ಕರಡಿ ಸಂಗಣ್ಣ ಬಿಜೆಪಿ ಟಿಕೆಟ್ ಬಯಸಿದ್ದರು. ಆದರೆ ಬಿಜೆಪಿ ಈ ಬಾರಿ ವೈದ್ಯ ಬಸವರಾಜ ಎಸ್ ಕ್ಯಾವಟೂರ್ ನೀಡಿದೆ.