ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election) ಬಿಜೆಪಿ (BJP) ಅಂಬೇಡ್ಕರ್ ಜಯಂತಿಯಂದೇ ತನ್ನ ಪ್ರಣಾಳಿಕೆ ʼಸಂಕಲ್ಪ ಪತ್ರʼವನ್ನು ಭಾನುವಾರ ಬಿಡುಗಡೆ ಮಾಡಲಿದೆ.
ದಲಿತ ಸಮುದಾಯದ ನಾಯಕ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ (Dr. BR Ambedkar) ಅವರ ಜನ್ಮ ದಿನಾಚರಣೆಯ ದಿನದಂದೇ ಬಿಜೆಪಿ ಪ್ರಣಾಳಿಕೆಯನ್ನು (BJP Manifesto) ಬಿಡುಗಡೆ ಮಾಡುತ್ತಿರುವುದು ವಿಶೇಷ. ಇದನ್ನೂ ಓದಿ: ಇಸ್ರೇಲ್ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್
Advertisement
Advertisement
ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
Advertisement
ಮೋದಿಯವರು ತಮ್ಮ ಭಾಷಣದಲ್ಲಿ ಯುವಕರು, ಮಹಿಳೆಯರು, ರೈತರು ಮತ್ತು ಬಡವರು ನಮ್ಮ ಸರ್ಕಾರದ ನಾಲ್ಕು ಜಾತಿಗಳು ಎಂದು ಆಗಾಗ ಪ್ರಸ್ತಾಪ ಮಾಡುತ್ತಿದ್ದರು. ಈ ನಾಲ್ಕು ವರ್ಗಗಳನ್ನು ಗುರಿಯಾಗಿಸಿ ಪ್ರಣಾಳಿಕೆಯನ್ನು ಸಿದ್ಧಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನಾಲ್ಕು ಹೋಟೆಲ್.. ನಾನಾ ವೇಷ; ಪಶ್ಚಿಮ ಬಂಗಾಳದಲ್ಲಿ ಕೆಫೆ ಬಾಂಬರ್‌ಗಳ ಕಣ್ಣಾಮುಚ್ಚಾಲೆ ಆಟ!
Advertisement
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಬಿಜೆಪಿಯು ಪ್ರಣಾಳಿಕೆ ಸಮಿತಿಯನ್ನು ರಚಿಸಿತ್ತು. ಪ್ರಣಾಳಿಕೆಗೆ ಸಂಬಂಧಿಸಿದಂತೆ ದೇಶದ ಜನರ ಸಲಹೆಗಳನ್ನು ಪಡೆಯುವ ಕುರಿತಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿಯೂ ಸಲಹೆ ನೀಡುವಂತೆ ಜನರಿಗೆ ತಿಳಿಸಿತ್ತು.