ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ (B.N.Bache Gowda) ಬಿಜೆಪಿ (BJP) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ರಾಜ್ಯಾಧ್ಯಕ್ಷ ವಿಜಯೇಂದ್ರಗೆ (Vijayendra) ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಕಳೆದ ವರ್ಷದ ಆಗಸ್ಟ್‌ನಲ್ಲಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದ ಬಚ್ಚೇಗೌಡ ಈಗ ಅಧಿಕೃತವಾಗಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: 5,8,9 ತರಗತಿಗೆ ಪರೀಕ್ಷೆ ಯಾವಾಗ? – ಗೊಂದಲದಲ್ಲಿ ವಿದ್ಯಾರ್ಥಿಗಳು, ಪೋಷಕರು
Advertisement
Advertisement
ಚುನಾವಣಾ (Election) ರಾಜಕೀಯದಿಂದ ದೂರ ಇರಲು ನಿರ್ಧಾರ ಮಾಡಿದ್ದರೂ ಸಕ್ರಿಯ ರಾಜಕಾರಣದಲ್ಲಿಯೇ ಬಚ್ಚೇಗೌಡ ಇರಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡದಿರಲು ಬಚ್ಚೇಗೌಡ ನಿರ್ಧರಿಸಿದ್ದಾರೆ.
ಇದನ್ನೂ ಓದಿ: ಐಪಿಎಲ್ ಹಬ್ಬದಲ್ಲಿ ಏನೆಲ್ಲಾ ವಿಶೇಷ – ಚೊಚ್ಚಲ ಟ್ರೋಫಿ ಗೆಲ್ಲುವ ವಿಶ್ವಾಸದಲ್ಲಿ ಆರ್‌ಸಿಬಿ ಕಲಿಗಳು
Advertisement
ಚಿಕ್ಕಬಳ್ಳಾಪುರ (Chikkaballapura) ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕವೇ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು.ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಹೊಸಕೋಟೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
Advertisement
2019ರ ಲೋಕಸಭಾ ಚುನಾವಣೆಯಲ್ಲಿ ಬಚ್ಚೇಗೌಡ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಅಂತರದಿಂದ ಸೋಲಿಸಿದ್ದರು. ಬಚ್ಚೇಗೌಡ ಅವರಿಗೆ 7,45,912 ಮತಗಳು ಬಿದ್ದರೆ ಮೊಯ್ಲಿ ಅವರಿಗೆ 5,63,802 ಮತಗಳು ಬಿದ್ದಿದ್ದವು.