– ಹಿಂದುಳಿದ, ದಲಿತರ, ಆದಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ಷಡ್ಯಂತ್ರ
ಭೋಪಾಲ್: ಕರ್ನಾಟಕದ ಕಾಂಗ್ರೆಸ್ ಸರ್ಕಾರ (Karnataka Congress Government) ಇತರೇ ಹಿಂದುಳಿದ ವರ್ಗದ (OBC) ಅಡಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ (Muslims Reservation) ನೀಡಿದ ವಿಚಾರವನ್ನು ಮತ್ತೆ ಪ್ರಸ್ತಾಪ ಮಾಡಿ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.
Advertisement
ಮಧ್ಯಪ್ರದೇಶದ ಮೊರೇನಾದಲ್ಲಿ ನಡೆದ ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ರಾತ್ರೋರಾತ್ರಿ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಎಲ್ಲ ವರ್ಗವನ್ನು ಒಬಿಸಿಗೆ ಸೇರಿಸಿ ಆದೇಶ ಹೊರಡಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮಾನ್ಯತೆ ನೀಡಿವ ಮೂಲಕ ಒಬಿಸಿ ಜನರ ಅವಕಾಶಗಳನ್ನು ಕಳ್ಳತನದಿಂದ ಕಿತ್ತುಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ನೇಹಾ ಕೊಲೆ ಆರೋಪಿಗೆ ಘೋರ ಶಿಕ್ಷೆ ಕೊಡಿಸುತ್ತೇವೆ: ಸಿದ್ದರಾಮಯ್ಯ
Advertisement
ಒಬಿಸಿ ಕೋಟಾಕ್ಕೆ ಎಲ್ಲಾ ಮುಸ್ಲಿಮರನ್ನು ಸೇರಿಸುವ ಮೂಲಕ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕಿದ್ದ ದೊಡ್ಡ ಪಾಲನ್ನು ಕಿತ್ತುಕೊಳ್ಳಲಾಗಿದೆ. ಈ ವಿಧಾನವನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಯೋಜಿಸುತ್ತಿದ್ದು, ಇದು ಒಬಿಸಿ ಸಮುದಾಯದವರಿಗೆ ಅತ್ಯಂತ ಅಪಾಯಕಾರಿ.
– ಪ್ರಧಾನಿ ಶ್ರೀ @narendramodi pic.twitter.com/PImcWdSKoP
— BJP Karnataka (@BJP4Karnataka) April 24, 2024
Advertisement
ಸಂವಿಧಾನ ಮತ್ತು ಕಾನೂನು ವಿರುದ್ಧವಾಗಿ ಒಬಿಸಿ ಮೀಸಲಾತಿಯನ್ನು ನೀಡಲಾಗಿದೆ. ಒಬಿಸಿ ಸಮುದಾಯಕ್ಕೆ ಸಿಗುವ ಲಾಭವನ್ನು ಲೂಟಿ ಮಾಡಿ ಅವರಿಗೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.
Advertisement
ಸಂವಿಧಾನ ರಚಿಸುವ ವೇಳೆ ತಿಂಗಳುಗಳ ಕಾಲ ಚರ್ಚೆ ನಡೆಸಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ನಿರ್ಧಾರಕ್ಕೆ ಬರಲಾಗಿತ್ತು. ಆದರೆ ಕಾಂಗ್ರೆಸ್ ಮೋಸ ಮಾಡಿ ಹಿಂಬಾಗಿಲಿನಿಂದ ಧರ್ಮ ಆಧಾರಿತ ಮೀಸಲಾತಿ ನೀಡಿದೆ. ವೋಟು ಬ್ಯಾಂಕ್, ತುಷ್ಟೀಕರಣ ಮುಳುಗಿರುವ ಕಾಂಗ್ರೆಸ್ ಕರ್ನಾಟಕದ ಇದೇ ಮಾದರಿಯನ್ನು ಇಡೀ ದೇಶದಲ್ಲಿ ಅನುಷ್ಠಾನಕ್ಕೆ ತರಲು ಮುಂದಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾರು ಅಪಫಾತ – ಶಾಸಕ ಎ.ಆರ್ ಕೃಷ್ಣಮೂರ್ತಿ ಅಪಾಯದಿಂದ ಪಾರು
ಕಾಂಗ್ರೆಸ್ ಹಿಂದುಳಿದ, ದಲಿತರ, ಆದಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ಷಡ್ಯಂತ್ರವನ್ನು ಬಹಳ ಹಿಂದಿನಿಂದಲೂ ಮಾಡುತ್ತಾ ಬಂದಿದೆ. ಹಿಂಬಾಗಿಲಿನಿಂದ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಪ್ರಯತ್ನ ಮಾಡುತ್ತಿದೆ. 2014 ರಿಂದ ಒಬಿಸಿ ಸಮುದಾಯ ಎಚ್ಚೆತ್ತುಕೊಂಡ ಬಳಿಕ ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರ ಇಟ್ಟಿದೆ. ಆದರೆ ಕಾಂಗ್ರೆಸ್ ಇನ್ನು ಸುಧಾರಿಸಿಲ್ಲ. ಕನಸು ಈಡೇಸಿಕೊಳ್ಳಲು ಈಗಲೂ ಪ್ರಯತ್ನ ಮುಂದುವರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಏನಿದು ಒಬಿಸಿ ವಿವಾದ?
ಉದ್ಯೋಗ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮೀಸಲಾತಿ (Reservation) ನೀಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಮುಸ್ಲಿಮರನ್ನು (Muslim) ಇತರೇ ಹಿಂದುಳಿದ ವರ್ಗಗಳ ಕೆಟಗರಿಗೆ ಸೇರಿಸಲು ಶಿಫಾರಸು ಮಾಡಿದೆ. ಈ ವಿಚಾರವನ್ನು ಪ್ರಸ್ತಾಪ ಮಾಡಿ ಮೋದಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರುತ್ತಿದ್ದಾರೆ.
#WATCH | Hansraj Gangaram Ahir, Chairperson, National Commission for Backward Classes says, "There is 32% reservation for OBCs in Karnataka. Under this, they have done bifurcation, like Category I, I(B), II(B), III(A), III(B). There are 95 castes including 17 castes of Muslims… pic.twitter.com/WTt4PUukRF
— ANI (@ANI) April 24, 2024
ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗ (NCBC) ಅಸಮಾಧಾನ ವ್ಯಕ್ತಪಡಿಸಿದೆ. ಮೀಸಲಾತಿ ನೀಡಲು ಮುಸ್ಲಿಮರನ್ನು ಒಬಿಸಿ ಕೆಟಗರಿಗೆ ಸೇರಿಸಿದೆ. ಇದು ಸಾಮಾಜಿಕ ನ್ಯಾಯ ತತ್ವಕ್ಕೆ ವಿರುದ್ಧವಾಗಿದೆ. ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ಒಬಿಸಿ ಮೀಸಲಾತಿ ನೀಡಬೇಕೇ ಹೊರತು, ಇಡೀ ಧರ್ಮವನ್ನೇ ಒಬಿಸಿಗೆ ಸೇರಿಸಿರುವುದು ಸರಿಯಲ್ಲ ಎಂದು ಎನ್‌ಸಿಬಿಸಿ ಅಸಮಾಧಾನ ವ್ಯಕ್ತಪಡಿಸಿದೆ.