ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರನ್ನು (HD Devegowda) ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ (CP Yogeshwar) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭಾನುವಾರ ಸಂಜೆ ಪದ್ಮನಾಭನಗರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ಮಾಡಿದ್ದಾರೆ.
ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ (BJP-JDS) ಮೈತ್ರಿ ಮಾಡಿಕೊಂಡಿರುವ ಕಾರಣ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಕುತೂಹಲ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್ ಭೇಟಿ ಮಹತ್ವ ಪಡೆದುಕೊಂಡಿದೆ. ಇದನ್ನೂ ಓದಿ: ಮೋದಿ 3ನೇ ಬಾರಿ ಪ್ರಧಾನಿಯಾಗೋದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ – ಹೆಚ್‌ಡಿಕೆ
ವಿಧಾನಸಭಾ ಚುನಾವಣೆಯಲ್ಲಿ ರಾಮನಗರದ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಯೋಗೇಶ್ವರ್ ಸೋತಿದ್ದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಕುಣಿಗಲ್, ರಾಜರಾಜೇಶ್ವರಿ ನಗರ, ಬೆಂಗಳೂರು ದಕ್ಷಿಣ, ಆನೇಕಲ್, ಮಾಗಡಿ, ರಾಮನಗರ, ಕನಕಪುರ, ಚನ್ನಪಟ್ಟಣ ಕ್ಷೇತ್ರಗಳು ವ್ಯಾಪ್ತಿಗೆ ಬರುತ್ತದೆ. 8 ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಇದ್ದರೆ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಶಾಸಕ ಹೆಚ್‌ಡಿ ಕುಮಾರಸ್ವಾಮಿ ಇದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಟ್ಟು 28 ಕ್ಷೇತ್ರಗಳಲ್ಲಿ 25ರಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ತಲಾ ಒಂದೊಂದು ಕ್ಷೇತ್ರಗಳನ್ನು ಗೆದ್ದಿತ್ತು. ಡಿಕೆ ಸುರೇಶ್ ಅವರು ರಾಜ್ಯದ ಏಕೈಕ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: 200 ಸಂಘಟನೆಗಳು, 20,000 ರೈತರಿಂದ ನಾಳೆ `ದೆಹಲಿ ಚಲೋ’ – ದೆಹಲಿ ಗಡಿ ಬಂದ್!