ಬೆಂಗಳೂರು: ಕರ್ನಾಟಕದಲ್ಲಿ (Karnataka) ಲೋಕಸಭಾ ಚುನಾವಣೆ (Lok Sabha Election) ಮುಕ್ತಾಯಗೊಳ್ಳುತ್ತಿರುವ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಕುಟುಂಬದ ಸದಸ್ಯರ ಜೊತೆ ಚಿಕ್ಕಮಗಳೂರಿಗೆ (Chikkamgaluru) ತೆರಳಿದ್ದಾರೆ.
ಚಿಕ್ಕಮಗಳೂರಿನ ರೆಸಾರ್ಟ್‌ನಲ್ಲಿ ಕುಟುಂಬದ ಜೊತೆ ಎರಡು ದಿನ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಮಳೆಗೆ ಕಾರಿನ ಮೇಲೆ ಮರ ಬಿದ್ದು ಯುವಕ ಸಾವು
Advertisement
Advertisement
ಡಿಕೆ ಶಿವಕುಮಾರ್ ಚಿಕ್ಕಮಗಳೂರಿಗೆ ತೆರಳಬೇಕಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸದಾಶಿವನಗರಕ್ಕೆ ವಾಪಸ್ ಆಗಿದ್ದಾರೆ. ಈಗ ಚಿಕ್ಕಮಗಳೂರಿಗೆ ರಸ್ತೆ ಮಾರ್ಗದಲ್ಲಿ ಡಿಕೆಶಿ ತೆರಳಲಿದ್ದಾರೆ.
Advertisement
ಮಂಗಳವಾರ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪರಕರಣಕ್ಕೆ ಸಂಬಂಧಿಸಿದಂತೆ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇ ಗೌಡ (Devaraje Gowda) ಅವರು ಡಿಕೆಶಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
Advertisement
ಈ ಆರೋಪಕ್ಕೆ ಪ್ರತಿಕ್ರಿಯಿಸಿದ್ದ ಡಿಕೆಶಿ, ಪಾಪ ಬಿಜೆಪಿ-ಜೆಡಿಎಸ್ ಅವರು ಅವನನ್ನು ಬಳಸಿಕೊಂಡು ಏನ್ ಬೇಕು ಮಾಡಿಸಿಕೊಳ್ಳುತ್ತಿದ್ದಾರೆ. ಇದು ಹಾಸನ ಜಿಲ್ಲೆಗೆ ರಾಜ್ಯಕ್ಕೆ ಗೊತ್ತಿರುವ ವಿಚಾರ. ಅವರಿಗೆ ಅವಮಾನ ಆಗಿದೆ ಹಿಟ್ ಆಂಡ್ ರನ್ ಮಾಡಿಕೊಂಡಿದ್ದಾರೆ. ಏನಾದರು ಮಾಡಿ ವಿಷಾಯಂತರ ಮಾಡಬೇಕು. ಅದನ್ನೇ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದರು.