ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ (Congress), ಮೈಸೂರಿನಿಂದ (Mysuru) ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಅವರನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ. ಆದರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮೌನವಾಗಿದ್ದು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಮಾತುಗಳ ಬೆನ್ನಲ್ಲೇ ಕಾಂಗ್ರೆಸ್ ಈ ತಂತ್ರ ಹೆಣೆದಿದೆ ಎನ್ನಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಪುತ್ರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಇನ್ನೊಂದೆಡೆ ಈ ನಿರ್ಧಾರದಿಂದ ವಿರೋಧಿಗಳು ಮತ್ತೆ ಒಂದಾಗುವ ಆತಂಕ ಕೂಡ ಎದುರಾಗಿದೆ. ಹೀಗಾಗಿ ಪುತ್ರನ ಸ್ಪರ್ಧೆಗೆ ಸಿಎಂ ಹೆಚ್ಚಿನ ಒಲವು ತೋರಿಸುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ಶನಿವಾರವೇ ಸುಪ್ರೀಂಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಸಿಎಂ ತೀರ್ಮಾನ; ತಜ್ಞರ ಸಲಹೆಗಳೇನು?
ವಿರೋಧಿಗಳು ಒಂದಾದರೆ ಚುನಾವಣೆಯ ಫಲಿತಾಂಶದ ಬಗ್ಗೆ ಆತಂಕ ಕೂಡ ಇದೆ. ಇದೇ ಕಾರಣಕ್ಕೆ ಪುತ್ರನ ಭವಿಷ್ಯದ ಬಗ್ಗೆ ಕಾದು ನೋಡುವ ತಂತ್ರದಲ್ಲಿ ಸಿಎಂ ಇದ್ದಾರೆ. ಆದರೆ ಪಕ್ಷದಲ್ಲಿ ಮಾತ್ರ ಯತೀಂದ್ರ ಅವರನ್ನು ಕಣಕ್ಕಿಳಿಸುವ ಚರ್ಚೆ ಜೋರಾಗಿದೆ. ಇದರ ನಡುವೆಯೇ ಅವರಿಗೆ ಕ್ಷೇತ್ರದಲ್ಲಿ ಸ್ಲೋ ಡೌನ್ ಸಂದೇಶ ಇದೆ ಎಂಬ ಮಾತುಗಳು ಕೇಳಿ ಬಂದಿವೆ.
ಈ ಕ್ಷೇತ್ರದಿಂದ ಅವರು ಕಣಕ್ಕಿಳಿದರೆ ರಾಜಕೀಯ ಲೆಕ್ಕಚಾರ ಬದಲಾಗುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗುತ್ತಿದೆ. ಅಲ್ಲದೇ ಪಕ್ಷದಲ್ಲಿ ಕ್ಷೇತ್ರದ ಟಿಕೆಟ್‌ಗಾಗಿ ಆಕಾಂಕ್ಷಿಗಳ ಪೈಪೋಟಿಗೆ ತಡೆಯಾಗಲಿದೆ. ಆದರೆ ಸಿಎಂ ಮಾತ್ರ ಪುತ್ರನನ್ನು ರಾಜ್ಯ ರಾಜಕಾರಣದಲ್ಲೇ ಉಳಿಸುವ ಬಗ್ಗೆ ಯೋಚನೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಚುನಾವಣೆ ವರೆಗೂ ಈ ಬಗ್ಗೆ ತಟಸ್ಥವಾಗಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಕೂಡ ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ ಎಂದಿದ್ದರು. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸಂಸದ ಅನಂತ್‌ಕುಮಾರ್ ಹೆಗಡೆ ಬಿಜೆಪಿ ಅಭ್ಯರ್ಥಿ: ಕಾಗೇರಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]