ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election) ಈ ಬಾರಿ ಡಾ. ಮಂಜುನಾಥ್ (Dr Manjunath) ಕಣಕ್ಕೆ ಇಳಿಯುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ರಾಜಕೀಯ ಪ್ರವೇಶಕ್ಕೆ ಡಾ. ಮಂಜುನಾಥ್ ಸಮ್ಮತಿ ಸೂಚಿಸುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (HD Devegowda) ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಜಯದೇವ ಆಸ್ಪತ್ರೆಯ (Jayadeva Hospital) ನಿವೃತ್ತ ನಿರ್ದೇಶಕ ಡಾ.ಮಂಜುನಾಥ್ ಅವರ ರಾಜಕೀಯ ಪ್ರವೇಶದ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಮಂಜುನಾಥ್ ಇಡೀ ದೇಶಾದ್ಯಂತ ತಮ್ಮದೇ ಆದ ಹೆಸರು ಮಾಡಿದ್ದಾರೆ. ಮುಗಿಲೆತ್ತರಕ್ಕೆ ಹೆಸರು ಮಾಡಿರುವ ಅವರು ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಬರುವುದು ಸರಿಯಲ್ಲ. ಅವರಿಗೆ ಈಗ ಒಂದು ಒಳ್ಳೆ ಸ್ಥಾನವಿದೆ ಎಂದು ಉತ್ತರಿಸಿದರು.
ಈ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಎಂದು ನಾನು ಒತ್ತಾಯಿಸುತ್ತಿಲ್ಲ. ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನವನ್ನು ನಾವು ಮಾಡುವುದಿಲ್ಲ. ರಾಜಕೀಯಕ್ಕೆ ಬರುವುದಕ್ಕೆ ಅವರು ಸಮ್ಮತಿ ಸೂಚಸುವುದಿಲ್ಲ ಅಂತ ಅಂದುಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಬಸ್ ನಿಲ್ದಾಣದಲ್ಲೇ ಟೈಮರ್ ಫಿಕ್ಸ್ – ಕೊನೆಯ 10 ನಿಮಿಷದ ಕಂಪ್ಲೀಟ್ ವರದಿ ಓದಿ
ಮೈತ್ರಿ ಸೀಟು ಹಂಚಿಕೆ, ಕುಮಾರಸ್ವಾಮಿ ಸ್ಪರ್ಧೆ ವಿಚಾರಕ್ಕೆ ಕೇಳಿದ್ದಕ್ಕೆ, ಇನ್ನೊಂದು ವಾರದಲ್ಲಿ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಆಗಗಲಿದೆ. ಅಮಿತ್ ಶಾ ಮತ್ತು ನಡ್ಡಾ ಯಾವ್ಯಾವ ಕ್ಷೇತ್ರದಲ್ಲಿ ಯಾರು ಸ್ಪರ್ಧೆ ಮಾಡಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ವಿಚಾರವನ್ನ ಮೋದಿ, ಅಮಿತ್ ಶಾ ಕುಳಿತು ಚರ್ಚೆ ಮಾಡುತ್ತಾರೆ ಎಂದು ಹೇಳಿದರು.
ಬೆಂಗಳೂರಿನ ಜಯದೇವ ಆಸ್ಪತ್ರೆಯನ್ನು ಮುನ್ನಡೆಸಿ ಈಗ ನಿವೃತ್ತರಾಗಿರುವ ಡಾ.ಸಿ.ಎನ್ ಮಂಜುನಾಥ್ ಅವರು ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಬಗ್ಗೆ ಇಲ್ಲಿಯವರೆಗೂ ಅಧಿಕೃತವಾಗಿ ಮಂಜುನಾಥ್ ಎಲ್ಲಿಯೂ ತಮ್ಮ ನಿರ್ಧಾರವನ್ನು ತಿಳಿಸಿಲ್ಲ. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಸಕ್ರೀಯ ರಾಜಕಾರಣಕ್ಕೆ ಇಳಿದ ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ಗಂಗೋಪಾಧ್ಯಾಯ
ಮೈಸೂರಿನ (Mysuru) ನಾಗರಿಕರ ಪರವಾಗಿ ಫೆ.26 ರಂದು ಆಯೋಜನೆಗೊಂಡಿದ್ದ ʼಧನ್ಯವಾದ ಧನ್ವಂತರಿʼ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದ ಮಂಜುನಾಥ್ ನನ್ನ ಸೇವೆ ರಾಷ್ಟ್ರ ಮಟ್ಟದಲ್ಲಿ ವಿಸ್ತರಣೆ ಆಗಬೇಕು ಎಂದು ಜನ ನಿರೀಕ್ಷೆ ಮಾಡುತ್ತಿದ್ದಾರೆ. ನಾನು ಕೂಡ ಈ ಬಗ್ಗೆ ಯೋಚನೆ ಮಾಡುತ್ತಿದ್ದೇನೆ ಎಂದು ಹೇಳಿದ್ದರು.