ನವದೆಹಲಿ: ಸೋಮವಾರ ಬೆಂಗಳೂರಲ್ಲಿ ಅಧಿಕೃತವಾಗಿ ಬಿಜೆಪಿ (BJP) ಸೇರುತ್ತಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರದ (Bengaluru Rural) ಮೈತ್ರಿ ಅಭ್ಯರ್ಥಿ ಡಾ.ಮಂಜುನಾಥ್ (Dr. Manjunath) ಹೇಳಿದ್ದಾರೆ.
ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಇದುವರೆಗೂ ಅವರನ್ನು ಭೇಟಿಯಾಗಿರಲಿಲ್ಲ. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಚುನಾವಣೆಗೆ ಸಹಕಾರ ಕೇಳಿ ಧನ್ಯವಾದ ಹೇಳಿದ್ದೇನೆ ಎಂದರು. ಇದನ್ನೂ ಓದಿ: WPL 2024: ಅಂಪೈರ್ ಎಡವಟ್ಟು – ಫಿಕ್ಸಿಂಗ್ ಹಣೆಪಟ್ಟಿ ಕಟ್ಟಿಕೊಂಡ ಮುಂಬೈ ಇಂಡಿಯನ್ಸ್
Advertisement
Advertisement
ವೈಯಕ್ತಿಕವಾಗಿ ಯಾರನ್ನು ಟೀಕೆ ಮಾಡಬಾರದು. ಇದೊಂದು ಧರ್ಮ ಯುದ್ಧ. ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡಲು ಅಲ್ಲ. ಜೆಡಿಎಸ್ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿದ್ದಾರೆ ಒಟ್ಟು 5.42 ಕೋಟಿ ಮತದಾರರು – ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರು?
Advertisement
ಕಾಂಗ್ರೆಸ್‌ನ ಡಿಕೆ ಸುರೇಶ್ (DK Suresh) ಅವರನ್ನು ಮಣಿಸಲು ಬಿಜೆಪಿ, ಜೆಡಿಎಸ್ (BJP, JDS) ಒಂದಾಗಿ ಡಾ. ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಿದೆ.
Advertisement