ಕೊಪ್ಪಳ: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ (Karatagi Police Station) ಪ್ರಕರಣ ದಾಖಲಾಗಿದೆ.
ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗ್ಯಾನನಗೌಡ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಿಕ್ಕೋಡಿಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆ
Advertisement
Advertisement
ಕಳೆದ ಮಾ.24 ರಂದು ಕೊಪ್ಪಳದ ಕಾರಟಗಿ ಪಟ್ಟಣದ ಸಚಿವ ಶಿವರಾಜ ತಂಗಡಗಿ ಅವರ ಗೃಹ ಕಚೇರಿ ಆವರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಸಚಿವ ಶಿವರಾಜ ತಂಗಡಗಿ ಅವರು, ಮೋದಿ ಮೋದಿ (Modi) ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಚೋದನೆ ನೀಡುವಂತೆ ಭಾಷಣ ಮಾಡಿದ್ದಾರೆ. ಸಚಿವರ ಮಾತುಗಳು ಶಿಕ್ಷಾರ್ಹ ಅಪರಾಧವಾಗಿದ್ದು, ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರು.
Advertisement
ಈ ಬಗ್ಗೆ ನಾನು ಮೇಲಧಿಕಾರಿಗಳ ಗಮನಕ್ಕೆ ತಂದು, ಅವರಿಂದ ಮಾಹಿತಿ ಪಡೆಯಬೇಕಾಗಿದ್ದರಿಂದ ತಡವಾಗಿ ದೂರು ಸಲ್ಲಿಸುತ್ತಿದ್ದೇನೆ ಎಂದು ತಮ್ಮ ದೂರಿನಲ್ಲಿ ಗ್ಯಾನನಗೌಡ ತಿಳಿಸಿದ್ದಾರೆ. ಇದನ್ನೂ ಓದಿ: 2011ರಿಂದ ನಾವು ವೋಟ್ ಮಾಡಿಲ್ಲ: ಸಂದೇಶ್‌ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿಗೆ ಮೋದಿ ಕರೆ