ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election) ಜೆಡಿಎಸ್ (JDS) ಅಭ್ಯರ್ಥಿಗಳು ಅಂತಿಮಗೊಂಡಿದ್ದು ಮಂಡ್ಯದಿಂದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy), ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna), ಕೋಲಾರದಿಂದ ಮಲ್ಲೇಶ್ ಬಾಬು (Mallesh Babu) ಕಣಕ್ಕೆ ಇಳಿಯಲಿದ್ದಾರೆ.
ಪ್ರಜ್ವಲ್ ರೇವಣ್ಣ ಸ್ಪರ್ಧೆಯನ್ನು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಅಂತಿಮಗೊಳಿಸಿದ್ದರು. ಮೂರು ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡು ಅಧಿಕೃತವಾಗಿ ಪ್ರಕಟಗೊಂಡಿಲ್ಲ. ಬುಧವಾರ ಪ್ರಕಟಗೊಳ್ಳುವ ಸಾಧ್ಯತೆಯಿದೆ.
Advertisement
Advertisement
ಹಾಸನದಲ್ಲಿ ಹೆಚ್‌ಡಿ ದೇವೇಗೌಡರು ಪ್ರಜ್ವಲ್ ರೇವಣ್ಣ ಹಾಸನದಿಂದ, ಮಲ್ಲೇಶ್ ಬಾಬು ಕೋಲಾರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಸುರಪುರ ಉಪಚುನಾವಣೆ; ಬಿಜೆಪಿಯಿಂದ ಮಾಜಿ ಶಾಸಕ ರಾಜುಗೌಡ ಕಣಕ್ಕೆ
Advertisement
ಮಲ್ಲೇಶ್ ಬಾಬು ಅವರು ಈ ಬಾರಿ ಬಂಗಾರಪೇಟೆಯಿಂದ ಕಣಕ್ಕೆ ಇಳಿದು ಕಾಂಗ್ರೆಸ್‌ನ ನಾರಾಯಣ ಸ್ವಾಮಿ ಮುಂದೆ ಸೋತಿದ್ದರು. ಪ್ರಜ್ವಲ್ ರೇವಣ್ಣ 2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಈಗ ಎರಡನೇ ಬಾರಿ ಕಣಕ್ಕೆ ಇಳಿಯುತ್ತಿದ್ದಾರೆ. ಇದನ್ನೂ ಓದಿ: ಮೋದಿ.. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿ
Advertisement
ಹೆಚ್‌ಡಿ ಕುಮಾರಸ್ವಾಮಿ ಲೋಕಸಭಾ ಕಣಕ್ಕೆ ಇಳಿಯುವುದು ಹೊಸದೆನಲ್ಲ. ಈ ಹಿಂದೆ 1996ರಲ್ಲಿ ಕನಕಪುರದಿಂದ ಆಯ್ಕೆ ಆಗಿದ್ದರು. 2009ರಲ್ಲಿ ಬೆಂಗಳೂರು ಗ್ರಾಮಾಂತರದಿಂದ ಜಯಗಳಿಸಿದ್ದರು. 2014ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿ ಸೋತಿದ್ದರು.