ಬೆಂಗಳೂರು/ಮೈಸೂರು: ಪ್ರಧಾನಿ ಮೋದಿ (Narendra Modi) ಆಗಮನ ಹೊತ್ತಲ್ಲೇ ಮೈಸೂರಿನಲ್ಲಿ(Mysuru) ಭಾರೀ ಬೆಳವಣಿಗೆಯಾಗಿದೆ. ಆರು ವರ್ಷಗಳ ಬಳಿಕ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಹಳೆಯ ಮಿತ್ರ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (Srinivasa Prasad) ನಿವಾಸಕ್ಕೆ ಭೇಟಿ ಕೊಟ್ಟು ಚರ್ಚೆ ನಡೆಸಿದ್ದಾರೆ.
ಈ ಬೆನ್ನಲ್ಲೇ ಭಾನುವಾರದ ಮೋದಿ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಇಲ್ಲ. ಅದಕ್ಕಾಗಿ ಮೋದಿ ಸಮಾವೇಶದಿಂದ ದೂರ ಉಳಿಯುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ಕಡ್ಡಿ ಮುರಿದಂತೆ ಹೇಳಿದ್ದಾರೆ. ಅಷ್ಟೇ ಅಲ್ಲದೇ ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಉತ್ತಮ ವಾತಾವರಣವಿದೆ ಎನ್ನುವ ಮೂಲಕ ಬಿಜೆಪಿಗೆ (BJP) ಶಾಕ್ ಕೊಟ್ಟಿದ್ದಾರೆ. ಇದನ್ನೂ ಓದಿ: ಇಸ್ರೇಲ್ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್
Advertisement
Advertisement
ಸಿಎಂ ಮಾತನಾಡಿ, ಕಾಂಗ್ರೆಸ್ ಬಗ್ಗೆ ಕನಿಕರ ಇರಲಿ ಎಂದಿದ್ದೇನೆ ಅಷ್ಟೇ. ಅವರ ಬಳಿ ರಾಜಕೀಯ ಚರ್ಚಿಸಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಜನ್ಮದಿನದಂದೇ ಸಂಕಲ್ಪ ಪತ್ರ – ಭಾನುವಾರ ಬಿಜೆಪಿ ಪ್ರಣಾಳಿಕೆ ಬಿಡುಗಡೆ
Advertisement
ಇದರ ಮಧ್ಯೆ ಎಚ್ಚೆತ್ತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಭಾನುವಾರ ಶ್ರೀನಿವಾಸ್ ಪ್ರಸಾದ್‌ರನ್ನು ಭೇಟಿ ಮಾಡುತ್ತೇನೆ. ಅವರು ಮೋದಿ ಕಾರ್ಯಕ್ರಮಕ್ಕೆ ಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.