Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ಗೆದ್ದಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ಗೆದ್ದಿದೆ: ಡಿಕೆಶಿ

Bengaluru City

ಈ ಚುನಾವಣೆಯಲ್ಲಿ ಭಾವನೆಗಿಂತ ಬದುಕು ಗೆದ್ದಿದೆ, ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ಗೆದ್ದಿದೆ: ಡಿಕೆಶಿ

Public TV
Last updated: June 4, 2024 9:22 pm
Public TV
Share
5 Min Read
dk shivakumar 2
SHARE

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಭಾವನೆಗಿಂತ ಬದುಕು ಗೆದ್ದಿದೆ. ಉತ್ತರ ಭಾರತದ ರಾಜ್ಯಗಳಲ್ಲೂ ಮೋದಿ (Narendra Modi) ಹಾಗೂ ರಾಮಮಂದಿರದ ಅಲೆ ಇಲ್ಲವಾಗಿದೆ ಎಂಬುದನ್ನು ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ ಕುರಿತಂತೆ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋಧ್ಯೆಯಲ್ಲೇ ಬಿಜೆಪಿ ಸೋತಿದೆ. ರಾಜ್ಯದಲ್ಲಿ ನಾವು 1 ಸ್ಥಾನದಿಂದ 9 ಸ್ಥಾನಗಳಿಗೆ ಏರಿಕೆ ಕಂಡಿದ್ದೇವೆ. ನಾವು 14 ಸ್ಥಾನಗಳ ನಿರೀಕ್ಷೆಯಲ್ಲಿದ್ದೆವು ಎಂದರು.

ನನ್ನ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಅವರ ಗೆಲುವಿಗೆ ವೈಯಕ್ತಿಕವಾಗಿ ಅವರಿಗೆ ಅಭಿನಂದಿಸುತ್ತೇನೆ. ಅವರ ಪಕ್ಷ ಗೆಲ್ಲುವುದಕ್ಕಿಂತ ಇಲ್ಲಿ ವ್ಯಕ್ತಿ ಗೆದ್ದಿದ್ದಾರೆ. ಬಹಳ ಲೆಕ್ಕಾಚಾರದಲ್ಲಿ ಅವರನ್ನು ಬಿಜೆಪಿಯಿಂದ ಸ್ಪರ್ಧಿಸುವಂತೆ ಮಾಡಿದ್ದರು. ಇಷ್ಟು ದೊಡ್ಡ ಅಂತರದ ಸೋಲಿನ ನಿರೀಕ್ಷೆ ಮಾಡಿರಲಿಲ್ಲ. ನನ್ನ ತಮ್ಮ ಉತ್ತಮ ಕೆಲಸ ಮಾಡಿದ್ದು, ಆಡಳಿತ ವಿರೋಧಿ ಅಲೆ ಇರಲಿಲ್ಲ. ಆದರೆ ಮಂಜುನಾಥ್ ಅವರಿಗೆ ಅವಕಾಶ ನೀಡಬೇಕು ಎಂದು ಜನ ಅವರನ್ನು ಗೆಲ್ಲಿಸಿದ್ದಾರೆ. ನನ್ನ ಕ್ಷೇತ್ರದಲ್ಲಿ 60 ಸಾವಿರ ಮತಗಳ ಮುನ್ನಡೆ ಪಡೆಯುವ ನಿರೀಕ್ಷೆ ಇತ್ತು. ಆದರೆ ಇಷ್ಟೊಂದು ಅಂತರದ ಸೋಲುವ ನಿರೀಕ್ಷೆ ಮಾಡಿರಲಿಲ್ಲ. ಈ ಫಲಿತಾಂಶದ ಮೂಲಕ ಜನ ಕೊಟ್ಟಿರುವ ಸಂದೇಶ ಅರಿಯುತ್ತೇನೆ. ಪ್ರಜ್ಞಾವಂತ ಮತದಾರರ ತೀರ್ಪು ಪ್ರಶ್ನಿಸುವುದಿಲ್ಲ. ನಮಗೆ ಇನ್ನೂ ಹೆಚ್ಚಿನ ಸ್ಥಾನ ಬರಬೇಕಾಗಿತ್ತು. ಯಾಕೆ ಕಡಿಮೆ ಬಂದಿದೆ ಎಂದು ಚಿಂತನೆ ಮಾಡುತ್ತೇವೆ. ಗ್ಯಾರಂಟಿ ಯೋಜನೆಗಳಿಂದ ಹೆಚ್ಚಿನ ಸೀಟು ನಿರೀಕ್ಷೆ ಮಾಡಿದ್ದೆವು. ಜನ ಯಾವ ವಿಚಾರದಲ್ಲಿ ನಮ್ಮನ್ನು ಒಪ್ಪಿಲ್ಲ ಎಂಬುದನ್ನು ಪರಿಶೀಲಿಸಿ ಅದನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಮೋದಿ ಅವರ ಜನಪ್ರಿಯತೆ ಕುಗ್ಗಿರುವುದು ಸಾಬೀತಾಗಿದೆ. ಹಿಂದಿ ಭಾಷಿಗರ ಭಾಗದಲ್ಲೂ ಕುಗ್ಗಿರುವುದು ಸ್ಪಷ್ಟವಾಗಿದೆ. ಬಿಜೆಪಿಗೆ ಸಂಪೂರ್ಣ ಬಹುಮತ ಇಲ್ಲ ಎಂಬುದನ್ನು ಎಲ್ಲರೂ ಒಪ್ಪಬೇಕು. ನನ್ನ ಕ್ಷೇತ್ರದಲ್ಲಿ ನನಗೆ ಹಿನ್ನಡೆಯಾಗಿದ್ದಂತೆ ಅಯೋಧ್ಯೆಯಲ್ಲೂ ಬಿಜೆಪಿ ಹಿನ್ನಡೆ ಅನುಭವಿಸಿದೆ. ಕಳೆದ ಬಾರಿ 303 ಕ್ಷೇತ್ರ ಗೆದ್ದಿದ್ದ ಬಿಜೆಪಿ 243 ಸ್ಥಾನಕ್ಕೆ ಕುಸಿದಿದೆ. ಬಿಜೆಪಿ ನಿಚ್ಚಳ ಬಹುಮತ ಪಡೆದಿಲ್ಲ. ಎನ್‌ಡಿಎ ಕೂಡ ಹೇಳಿಕೊಂಡಿದ್ದ ಸಾಧನೆ ಮಾಡಿಲ್ಲ. ಬೇರೆ ಪಕ್ಷಗಳ ಮೇಲೆ ಅವಲಂಬಿತವಾಗಿವೆ. 10 ವರ್ಷಗಳ ನಂತರ ಕಾಂಗ್ರೆಸ್ ಪಕ್ಷ 100ರ ಗಡಿ ದಾಟಿದ್ದು, ಜನರು ಮತ್ತೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಈ ಚುನಾವಣೆ ಮನದಟ್ಟು ಮಾಡಿದೆ ಎಂದು ತಿಳಿಸಿದರು.

ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಜೋಡೋ ಯಾತ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಿರಂತರ ಪರಿಶ್ರಮ ಹೋರಾಟದಿಂದ ಪಕ್ಷ ಚೇತರಿಕೆ ಕಂಡಿದೆ. ಪ್ರಿಯಾಂಕಾ ಗಾಂಧಿ ಅವರ ಕೊಡುಗೆ ಸಾಕಷ್ಟು ಇದೆ. ಕಾಂಗ್ರೆಸ್ ಪಕ್ಷದ ಮತ ಪ್ರಮಾಣ ಕೂಡ ಹೆಚ್ಚಾಗಿದೆ. ಹಳೇ ಮೈಸೂರು ಭಾಗದಲ್ಲಿ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಲೋಕಸಭೆ ಚುನಾವಣೆ ಮತ ಪ್ರಮಾಣ ಕುಸಿದಿದ್ದು, ಮೊದಲಿನಿಂದಲೂ ಈ ರೀತಿ ವ್ಯತ್ಯಾಸ ಕಂಡು ಬಂದಿದೆ. ಎಸ್‌ಎಂ ಕೃಷ್ಣ ಅವರ ಸರ್ಕಾರ ಇದ್ದಾಗಲೂ ಹೀಗೆ ಆಗಿತ್ತು. ಅದು ಈ ರಾಜ್ಯದ ರಾಜಕೀಯ ಗುಣ. ಈ ಬಾರಿ ಬದಲಾಗಬಹುದು ಅಂದುಕೊಂಡಿದ್ದೆವು. ಆದರೆ ಆಗಲಿಲ್ಲ. ನನ್ನ ಕ್ಷೇತ್ರದಲ್ಲಿ 60 ಸಾವಿರ ಮುನ್ನಡೆ ನಿರೀಕ್ಷೆ ಇತ್ತು. ಆದರೆ 26 ಸಾವಿರ ಮಾತ್ರ ಬಂದಿದೆ. ಚನ್ನಪಟ್ಟಣದಲ್ಲಿ ಅವರಿಗೆ ಉಲ್ಟಾ ಬಂದಿದೆ. ಇದರಿಂದ ನಾವು ಪಾಠ ಕಲಿಯುತ್ತೇವೆ. ವೈಯಕ್ತಿಕವಾಗಿ ಕೆಲವು ಅನುಮಾನಗಳಿವೆ. ಆದರೂ ಜನರ ತೀರ್ಪನ್ನು ಗೌರವಿಸುತ್ತೇನೆ. ಕಲ್ಯಾಣ ಕರ್ನಾಟಕದಲ್ಲಿ ಜನ ನಮಗೆ ಆಶೀರ್ವಾದ ನೀಡಿದ್ದಾರೆ. ಮನ್ಸೂರ್ ಅಲಿ ಖಾನ್ ಅವರು ಕೊನೇ ಹಂತದಲ್ಲಿ ಸೋಲನ್ನು ಅನುಭವಿಸಿದ್ದಾರೆ. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತೇವೆ ಎಂದರು.

ಗ್ಯಾರಂಟಿ ಯೋಜನೆ ಕೈಹಿಡಿಯಲಿಲ್ಲವೇ, ಈ ಫಲಿತಾಂಶದಿಂದ ತೃಪ್ತಿಯಾಗಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಈಗಲೇ ಆ ರೀತಿ ಹೇಳಲು ಸಾಧ್ಯವಿಲ್ಲ. ಕನಿಷ್ಠ 14 ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಲಿದೆ ಎಂದು ಭಾವಿಸಿದ್ದೆವು. ಬೆಂಗಳೂರು, ಮುಂಬೈ ಕರ್ನಾಟಕ ಸೇರಿದಂತೆ ಇನ್ನು ಕೆಲವು ಕಡೆ ನಮಗೆ ನಿರೀಕ್ಷಿತ ಮಟ್ಟದ ಫಲಿತಾಂಶ ಬಂದಿಲ್ಲ. ಯಾವ ವರ್ಗ ಯಾಕೆ ನಮ್ಮಿಂದ ದೂರವಾಗಿದೆ ಎಂದು ಪರಿಶೀಲನೆ ಮಾಡುತ್ತೇವೆ. ಹೀಗಾಗಿ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ಕೈ ಹಿಡಿದಿಲ್ಲ ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಎಕ್ಸಿಟ್ ಪೋಲ್ ಸುಳ್ಳಾಗಿರುವ ಬಗ್ಗೆ ಕೇಳಿದಾಗ, ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ನನಗೆ ನಂಬಿಕೆ ಇಲ್ಲ ಎಂದು ಹೇಳಿದ್ದೆ. ನಮಗೆ ಎರಡಂಕಿ ಸ್ಥಾನ ಬರಲಿದೆ ಎಂದು ಭಾವಿಸಿದ್ದೆವು. ಕೊನೆ ಕ್ಷಣದವರೆಗೂ ನಾವು ಎರಡಂಕಿ ಸ್ಥಾನ ಪಡೆದಿದ್ದೆವು. ಕೆಲವು ಕೆಲಸಗಳಿಗೆ ಮತ ಬರುತ್ತವೆ ಎಂದು ಭಾವಿಸಿದ್ದೆವು. ಆದರೆ ನಿರೀಕ್ಷಿತ ಮಟ್ಟದಲ್ಲಿ ಮತ ಬಂದಿಲ್ಲ. ಕೇಂದ್ರದಲ್ಲಿ ಅತಂತ್ರದ ಪರಿಸ್ಥಿತಿ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಗೆ ನಿರೀಕ್ಷಿತ ಸಂಖ್ಯಾಬಲ ಸಿಕ್ಕಿಲ್ಲ. ಅವರು ಈ ಸೋಲನ್ನು ಸ್ವೀಕರಿಸಬೇಕು. ಮಹಾರಾಷ್ಟ್ರದಲ್ಲಿ ಅವರು ಮಾಡಿದ ಕುತಂತ್ರವನ್ನು ಜನ ಒಪ್ಪಿಲ್ಲ. ಉತ್ತರ ಪ್ರದೇಶದಲ್ಲೂ ರಾಮಮಂದಿರ, ಮೋದಿ ಗಾಳಿ ಇಲ್ಲ. ಭಾವನೆಗಿಂತ ಬದುಕು ಈ ಚುನಾವಣೆಯಲ್ಲಿ ಗೆದ್ದಿದೆ. ನಮ್ಮ ನಾಯಕರು ಸಭೆ ಮಾಡುತ್ತಿದ್ದಾರೆ. ಭಾರತೀಯ ರಾಜಕಾರಣದಲ್ಲಿ ಯಾವಾಗ ಏನು ಬೇಕಾದರೂ ನಡೆಯಬಹುದು ಎಂದರು.

ರಾಹುಲ್ ಗಾಂಧಿ ಅವರು ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಗ್ಗೆ ಉತ್ತರಿಸಿ, ಎಐಸಿಸಿ ಅಧ್ಯಕ್ಷರು ಪ್ರಿಯಾಂಕಾ ಗಾಂಧಿ ಅವರು ನಿರಂತರ ಪ್ರಚಾರ ಮಾಡಿದ್ದಾರೆ ಎಂದರು. ಡಿಕೆ ಸಹೋದರರ ವಿರುದ್ಧ ಬಿಜೆಪಿ ಹಾಗೂ ಕುಮಾರಸ್ವಾಮಿ ಅವರ ಮಿಷನ್ ಸಕ್ಸಸ್ ಆಗಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಶಸ್ಸು ಆಗಿರಬಹುದು. ಮಂಜುನಾಥ್ ಅವರನ್ನು ಸ್ಪರ್ಧೆ ಮಾಡಿಸಿದ್ದು ಅವರ ಯಶಸ್ಸಿಗೆ ಕಾರಣ. ಅದನ್ನು ನಾವು ಒಪ್ಪಿದ್ದೇವೆ. ಇದು ಮಂಜುನಾಥ್ ಅವರ ಗೆಲುವು. ಅವರ ಪಕ್ಷಗಳ ಗೆಲುವಲ್ಲ ಎಂದಿದ್ದಾರೆ.

ಪಕ್ಷ ಅಭ್ಯರ್ಥಿಗಳ ಆಯ್ಕೆಯಲ್ಲಿ ಎಡವಿತಾ ಎಂಬ ಕುರಿತು ಮಾತನಾಡಿ, ಉತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಅಭ್ಯರ್ಥಿಗಳು ಸರಿಯಾಗಿದ್ದರು. ಎಲ್ಲಾ ಕಾರ್ಯಕರ್ತರೂ ಉತ್ತಮವಾಗಿ ಕೆಲಸ ಮಾಡಿದ್ದರು. ನಾನು ಯಾವುದೇ ಕಾರ್ಯಕರ್ತರನ್ನು ದೂರುವುದಿಲ್ಲ. ಜನರ ತೀರ್ಪು ಗೌರವಿಸುತ್ತೇನೆ ಎಂದರು. ಕೇಂದ್ರದಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ನಿಮ್ಮ ಸಹಾಯ ಕೇಳಿದ್ದಾರಾ ಎಂದು ಪ್ರಶ್ನಿಸಿದಾಗ, ಇಲ್ಲ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ಎಂದು ಉತ್ತರಿಸಿದ್ದಾರೆ.

TAGGED:bengalurubjpcongressDK ShivakumarElecyions ResultsLok Sabha electionಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Sanjay Malhotra
Latest

ರೆಪೋ ದರ ಯಥಾಸ್ಥಿತಿ ಮುಂದುವರಿಸಲು RBI ನಿರ್ಧಾರ

Public TV
By Public TV
8 minutes ago
Bengaluru Nayandhalli
Bengaluru City

ಆಟವಾಡ್ತಾ ಮೂರನೇ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು – ಮಗಳ ಸ್ಥಿತಿ ಕಂಡು ತಾಯಿ ಮೂರ್ಛೆ

Public TV
By Public TV
39 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಪ್ರಕರಣ – 24 ಗಂಟೆ ಕಳೆದ್ರೂ ಸಿಗದ ಸುಳಿವು

Public TV
By Public TV
2 hours ago
Raichuru Lingasuguru Protest
Districts

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

Public TV
By Public TV
2 hours ago
vinay kulkarni
Bengaluru City

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

Public TV
By Public TV
2 hours ago
Train
Bengaluru City

ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?