ಬೆಂಗಳೂರು: ಲೋಕಸಭಾ ಚುನಾವಣೆಗೆ ಕೊನೆಗೂ ಜೆಡಿಎಸ್ (JDS) ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆಯಾಗಿದೆ. ಮೂವರು ಅಭ್ಯರ್ಥಿಗಳನ್ನು ಪಕ್ಷ ಅಖಾಡಕ್ಕೆ ಇಳಿಸಿದೆ.
ಮಂಡ್ಯದಿಂದ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy), ಹಾಸನ- ಪ್ರಜ್ವಲ್ ರೇವಣ್ಣ (Prajwal Revanna) ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು (Mallesh Babu) ಕಣಕ್ಕಿಳಿದಿದ್ದಾರೆ. ಇದನ್ನೂ ಓದಿ: ದೈವಕೋಲದ ವೇಳೆ ಸಾರ್ವಜನಿಕ ಸಭೆ – ಜಯಪ್ರಕಾಶ್ ಹೆಗ್ಡೆ ವಿರುದ್ಧ ಕೇಸ್
Advertisement
Advertisement
ಮಲ್ಲೇಶ್ ಬಾಬು ಅವರು ಈ ಬಾರಿ ಬಂಗಾರಪೇಟೆಯಿಂದ ಕಣಕ್ಕೆ ಇಳಿದು ಕಾಂಗ್ರೆಸ್‌ನ ನಾರಾಯಣ ಸ್ವಾಮಿ ಮುಂದೆ ಸೋತಿದ್ದರು. ಪ್ರಜ್ವಲ್ ರೇವಣ್ಣ 2019ರ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಈಗ ಎರಡನೇ ಬಾರಿ ಕಣಕ್ಕೆ ಇಳಿಯುತ್ತಿದ್ದಾರೆ.
Advertisement
Advertisement
ಹೆಚ್‌ಡಿ ಕುಮಾರಸ್ವಾಮಿ ಲೋಕಸಭಾ ಕಣಕ್ಕೆ ಇಳಿಯುವುದು ಹೊಸದೆನಲ್ಲ. ಈ ಹಿಂದೆ 1996ರಲ್ಲಿ ಕನಕಪುರದಿಂದ ಆಯ್ಕೆ ಆಗಿದ್ದರು. 2009ರಲ್ಲಿ ಬೆಂಗಳೂರು ಗ್ರಾಮಾಂತರದಿಂದ ಜಯಗಳಿಸಿದ್ದರು. 2014ರ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿ ಸೋತಿದ್ದರು. ಇದನ್ನೂ ಓದಿ: ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ