ಮೈಸೂರು: ಜೆಡಿಎಸ್ (JDS) ವಿಶ್ವಾಸ ಕಾಪಾಡಿಕೊಂಡರೆ ಟಾರ್ಗೆಟ್ 28 (Target) ಸಾಧ್ಯವಾಗುತ್ತದೆ. ಹೋದಲ್ಲಿ, ಬಂದಲ್ಲಿ ಕಾರ್ಯಕರ್ತರ ಸಭೆ ಹಾಗೂ ಮೈತ್ರಿ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಲು ಹೋಗಬೇಡಿ ಎಂದು ಬಿಜೆಪಿ (BJP) ನಾಯಕರಿಗೆ ಗೃಹ ಸಚಿವ ಅಮಿತ್ ಶಾ (Amit Shah) ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ.
ಕಳೆದ ವಿಧಾಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ (PM Narendra Modi) ಹಾಗೂ ಅಮಿತ್ ಶಾ ಅಬ್ಬರದ ಪ್ರಚಾರ ಮಾಡಿದ್ದರೂ ಕಾಂಗ್ರೆಸ್ ಪಕ್ಷಕ್ಕೆ ಜನ ಬಹುಮತ ನೀಡಿದರು. ಅದರಲ್ಲೂ ಮೈಸೂರು ಭಾಗದಲ್ಲಿ ಬಿಜೆಪಿಗೆ ನಿರೀಕ್ಷೆಯಷ್ಟು ಗೆಲುವಾಗಿರಲಿಲ್ಲ. ಹೀಗಾಗಿ ಲೋಕಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಮಿತ್ ಶಾ ಜೆಡಿಎಸ್ ಮೈತ್ರಿಯೊಂದಿಗೆ ಒಕ್ಕಲಿಗರ ಪ್ರಭಾವವಿರುವ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದ ಬುನಾದಿಯನ್ನು ಭದ್ರಪಡಿಸಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಿಯರು ಭಾರತದ ಅತಿದೊಡ್ಡ ಆಸ್ತಿ – ಕಾಂಗ್ರೆಸ್ ಮಾಜಿ ಸಚಿವ
Advertisement
Advertisement
ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ಹಾಗೂ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕೆಂಬ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ನಿಮಗೆ ವಹಿಸಿರುವ ಟಾಸ್ಕ್ ಮಾತ್ರ ಪೂರ್ಣ ಮಾಡಿ. ಮೈತ್ರಿ ಧರ್ಮ ಪಾಲನೆ ಸ್ವಲ್ಪ ಎಡವಟ್ಟಾದರೆ ಕಷ್ಟವಾಗುತ್ತದೆ ಎಂದು ಅಮಿತ್ ಶಾ ಮೈಸೂರು ಕ್ಲಸ್ಟರ್ ಸಭೆಯಲ್ಲಿ ಖಡಕ್ ಎಚ್ಚರಿಕೆ ನೀಡಿದ್ದಾರೆ
Advertisement
ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರಗಳಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸುವ ಮೂಲಕ ಅವುಗಳನ್ನು ಬಿಜೆಪಿ ಮತಗಳನ್ನಾಗಿ ಪರಿವರ್ತಿಸಲು ನಿಗಾವಹಿಸಿಬೇಕೆಂದು ಮುಖಂಡರಿಗೆ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra Yediyurappa) ಹೇಳಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ದೊಡ್ಡ ಗೆಲುವು – ಕತಾರ್‌ನಲ್ಲಿ ಅರೆಸ್ಟ್ ಆಗಿದ್ದ ನೌಕಾ ಅಧಿಕಾರಿಗಳು ಬಿಡುಗಡೆ, ಸ್ವದೇಶಕ್ಕೆ ವಾಪಸ್
Advertisement