ಕೋಲ್ಕತ್ತಾ: ಲೋಕಸಭೆ ಚುನಾವಣೆಯ (Lok Sabha Election) ಶೇಕಡಾವಾರು ಮತ ಪ್ರಮಾಣ ದಿಢೀರ್ ಏರಿಕೆಯಾಗಿದ್ದನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಮತ್ತೆ ಇವಿಎಂ (EVM) ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ್ದಾರೆ.
ಮುರ್ಷಿದಾಬಾದ್ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು (Election Commission) ಈ ಹಿಂದೆ ಬಿಡುಗಡೆ ಮಾಡಿದ್ದ ಮತ ಪ್ರಮಾಣಕ್ಕಿಂತ ಸುಮಾರು 5.75% ಮತದಾನ ಹೆಚ್ಚಳವಾಗಿದೆ. ಮತ ಪ್ರಮಾಣ ದಿಢೀರ್ ಹೆಚ್ಚಳವಾಗಿದ್ದು ಆತಂಕಕಾರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ ಸೇರಿ ದೇಶದ ಹಲವೆಡೆ ಮೇ ತಿಂಗಳಲ್ಲಿ ಸಾಮಾನ್ಯ ಮಳೆ
Advertisement
Advertisement
ಮತದಾನದ ಶೇಕಡಾವಾರು ಹಠಾತ್ ಹೆಚ್ಚಳವು ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಆತಂಕಗಳನ್ನು ಹುಟ್ಟುಹಾಕುತ್ತದೆ. ದೀರ್ಘಕಾಲದವರೆಗೆ ಹಲವಾರು ಇವಿಎಂಗಳು ನಾಪತ್ತೆಯಾಗಿರುವುದರಿಂದ ಬಿಜೆಪಿಯು ಫಲಿತಾಂಶಗಳನ್ನು ದುರ್ಬಳಕೆ ಮಾಡುವ ಸಾಧ್ಯತೆಯಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿ: ಮೋದಿಗೆ ಸಿಎಂ ಪತ್ರ
Advertisement
ಈ ಚುನಾವಣೆಯನ್ನು ಗೆಲ್ಲಲು ಬಿಜೆಪಿ (BJP) ಯಾವುದೇ ಹಂತಕ್ಕೆ ಇಳಿಯಬಹುದಾದ್ದರಿಂದ ಇವಿಎಂ ತಯಾರಕರ ವಿವರಗಳನ್ನು ಚುನಾವಣಾ ಆಯೋಗ ಸಾರ್ವಜನಿಕಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
Advertisement
ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ನಡೆದ ಚುನಾವಣಾ ಮತ ಪ್ರಮಾಣದ ವಿವರವನ್ನು ಚುನಾವಣಾ ಆಯೋಗ ಮಂಗಳವಾರ ಸಂಜೆ ಪ್ರಕಟಿಸಿತ್ತು. ಮೊದಲ ಹಂತದ ಲೋಕಸಭಾ ಚುನಾವಣೆಯಲ್ಲಿ 66.14% ಮತ್ತು ಎರಡನೇ ಹಂತದಲ್ಲಿ 66.71% ರಷ್ಟು ಮತದಾನವಾಗಿದೆ ಎಂದು ಹೇಳಿದೆ.
ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು ಮೇ 7, ಮೇ 13, ಮೇ 20, ಮೇ 25 ಮತ್ತು ಜೂನ್ 1 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.