ಧಾರವಾಡ: ಕ್ಷೇತ್ರದ ಹೊರಗಿದ್ದುಕೊಂಡೇ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಶಾಸಕ ವಿನಯ್ ಕುಲಕರ್ಣಿ (Vinay Kulkarni) ನಾಲ್ಕು ವರ್ಷದ ಬಳಿಕ ಧಾರವಾಡಕ್ಕೆ (Dharawda) ಕಾಲಿಟ್ಟಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ(Yogesh Gowda Murder Case) ಸಂಬಂಧಿಸಿದಂತೆ ಜೈಲುವಾಸ ಅನುಭವಿಸಿ, ಜಾಮೀನಿನ ಮೇಲೆ ಹೊರಗಿರುವ ವಿನಯ್ ಕುಲಕರ್ಣಿ ಅವರು ಯಾವುದೇ ಕಾರಣಕ್ಕೂ ಧಾರವಾಡ ಜಿಲ್ಲಾ ಪ್ರವೇಶ ಮಾಡಬಾರದು ಎಂದು ಸುಪ್ರೀಂ ಕೋರ್ಟ್ (Supreme Court) ನಿರ್ಬಂಧ ಹೇರಿದೆ. ಹೀಗಿದ್ದರೂ ವಿನಯ್ ಕುಲಕರ್ಣಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದನ್ನೂ ಓದಿ: ಒಕ್ಕಲಿಗ ನಾಯಕತ್ವಕ್ಕಾಗಿ ಚಿಲ್ರೆ ಕೆಲ್ಸ ಮಾಡಿದ್ರೆ ಆಗಲ್ಲ: ಡಿವಿಎಸ್
Advertisement
Advertisement
ಚುನಾವಣೆ ಬಳಿಕ ಹಲವು ಬಾರಿ ತಮಗೆ ಧಾರವಾಡ ಜಿಲ್ಲಾ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ನ್ಯಾಯಾಲಯಕ್ಕೆ ಅವರು ಅರ್ಜಿ ಸಲ್ಲಿಸುತ್ತಲೇ ಬಂದಿದ್ದರೂ ನ್ಯಾಯಾಲಯ ಮಾತ್ರ ಅವರ ಅರ್ಜಿಯನ್ನು ತಿರಸ್ಕರಿಸುತ್ತಲೇ ಬಂದಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡುವ ಸಲುವಾಗಿ ಧಾರವಾಡಕ್ಕೆ ಹೋಗಲು ಅವಕಾಶ ನೀಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನ್ಯಾಯಾಲಯ ಕೂಡ ಅವರ ಅರ್ಜಿ ತಿರಸ್ಕರಿಸಿದ ಕಾರಣ ಅವರು ಬೆಂಗಳೂರಿನ ಹೈಕೋರ್ಟ್ (High Court) ಮೊರೆ ಹೋಗಿದ್ದರು.
Advertisement
ವಿನಯ್ ಕುಲಕರ್ಣಿ ಮನವಿಗೆ ಸ್ಪಂದಿಸಿದ ಹೈಕೋರ್ಟ್, ಲೋಕಸಭಾ ಚುನಾವಣೆಗೆ (Lok Sabha Election) ಮತದಾನ ಮಾಡಿ ಬರಬಹುದು. ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಕೂಡಲೇ ಧಾರವಾಡ ಬಿಟ್ಟು ಮತ್ತೆ ಹೊರಡಬೇಕು ಎಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಧಾರವಾಡ ಸಪ್ತಾಪುರದಲ್ಲಿರುವ ಶಾರದಾ ಸ್ಕೂಲ್‌ನ ಮತಗಟ್ಟೆ 75ಕ್ಕೆ ಬಂದ ವಿನಯ್ ಕುಲಕರ್ಣಿ ತಮ್ಮ ಹಕ್ಕು ಚಲಾಯಿಸಿ ಮತ್ತೆ ಅಲ್ಲಿಂದ ತೆರಳಿದ್ದಾರೆ. ಇದನ್ನೂ ಓದಿ: ಕಾಡಿನಲ್ಲಿ ಇರೋದು ಒಬ್ಬನೇ ವ್ಯಕ್ತಿ – ಕೇವಲ ಒಂದೇ ವೋಟ್‌ನಿಂದ 100% ಮತದಾನ
Advertisement
ಧಾರವಾಡಕ್ಕೆ ಬರುತ್ತಿದ್ದಂತೆ ಸೇರಿದ್ದ ವಿನಯ್ ಅವರ ಬೆಂಬಲಿಗರು ಅವರ ಪರ ಘೋಷಣೆಗಳನ್ನು ಕೂಗಿದರು. ಅವರ ಕೈ ಕುಲುಕಿ ಖುಷಿಪಟ್ಟರು. ವಿನಯ್ ಅವರು ಆಗಮಿಸುತ್ತಿದ್ದಂತೆ ಅವರ ಪತ್ನಿ ಶಿವಲೀಲಾ ಹಾಗೂ ಪುತ್ರಿ ವೈಶಾಲಿ ಕೂಡ ಹರ್ಷ ವ್ಯಕ್ತಪಡಿಸಿ ಅವರನ್ನು ಭೇಟಿಯಾದರು. ಅಲ್ಲದೇ ಕಾರ್ಯಕರ್ತರು ವಿನಯ್ ಅವರ ಕಾರಿನ ಮೇಲೆ ಹೂಮಳೆ ಸುರಿಸಿದರು.
ವಿನಯ್ ಅವರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಸಾಥ್ ನೀಡಿದರು.