ಮಂಡ್ಯ: ಮತ್ತೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಲ್ಲಿ (Mandya) ಕಣಕ್ಕೆ ಇಳಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ.
ಮಂಡ್ಯ ಜೆಡಿಎಸ್‍ನ (JDS) ಲೋಕಸಭಾ ಚುನಾವಣೆ (Lok Sabha Election) ಪೂರ್ವಭಾವಿ ಸಭೆಯಲ್ಲಿ ಹಲವು ನಾಯಕರು, ಕಾರ್ಯಕರ್ತರು ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂದು ಆಶಯ ವ್ಯಕ್ತಪಡಿಸಿದರು.
Advertisement
Advertisement
ನಾಯಕರ ಮನವಿಗೆ ಸ್ಪಂದಿಸಿದ ಕುಮಾರಸ್ವಾಮಿ, ನಿಮ್ಮ ಆಸೆಗೆ ನಾವು ಭಂಗ ತರುವುದಿಲ್ಲ. ನಿಖಿಲ್ ಕುಮಾರಸ್ವಾಮಿಯಲ್ಲಿ ಒಂದು ಮಾತು ಹೇಳುತ್ತೇನೆ. ನಿಮ್ಮ ಭಾವನೆಗಳಿಗೆ ಯಾವುದೇ ಕಾರಣಕ್ಕೂ ನಿರಾಸೆಯಾಗಲ್ಲ. ನಿಮ್ಮ ಆಸೆಯ ಪ್ರಕಾರ ಅದನ್ನು ನೇರವೇರಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.
Advertisement
ಮಾರ್ಚ್ 24ಕ್ಕೆ ನನಗೆ ಅಪರೇಷನ್ ಇದೆ. ಮಾರ್ಚ್ 25ಕ್ಕೆ ಬಂದು ನಾನು ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡುತ್ತೇನೆ. ನಿಖಿಲ್ ಒಪ್ಪಿಸಲು ನಾನು ಮುಂದಾಗುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಇದನ್ನೂ ಓದಿ: ನಾಗಸಾಧು ಭೇಟಿ ಮಾಡಿ ಪ್ರಚಾರ ಆರಂಭ ಮಾಡಿದ ಶ್ರೀರಾಮುಲು
Advertisement
ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಈ ಬಾರಿಯ ಚುನಾವಣೆಗೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಅಭಿಮಾನಿಗಳು, ನಾಯಕರು ನಿಖಿಲ್ ಸ್ಪರ್ಧೆಯ ಬಗ್ಗೆ ಒಲವು ವ್ಯಕ್ತಪಡಿಸುತ್ತಿರುವ ಕಾರಣ ಈಗ ಅವರ ನಿಲುವು ಏನು ಎನ್ನುವುದು ಸದ್ಯದ ಕುತೂಹಲ.