– ಭಾರತ ಈಗ ರಾಮ ಮಂದಿರ, ರಾಮನವಮಿಯಿಂದ ಸವಾಲು ಎದುರಿಸುತ್ತಿದೆ
– ಪಶ್ಚಿಮದ ಜನರು ಅರಬ್ಬರಂತೆ ಕಾಣಿಸುತ್ತಾರೆ
ನವದೆಹಲಿ: ಸಂಪತ್ತಿನ ಮರು ಹಂಚಿಕೆಯ (Wealth Redistribution) ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ಗೆ ಮುಜುಗರವನ್ನು ಉಂಟು ಮಾಡಿದ್ದ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ (Sam Pitroda) ಪೂರ್ವ ಭಾರತದ ಜನರು ಚೀನಿಯರಂತೆ, ದಕ್ಷಿಣ ಭಾರತದ ಜನ ಆಫ್ರಿಕನ್ನರಂತೆ ಕಾಣಿಸುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.
ಮಾಧ್ಯಮವೊಂದರ ಜೊತೆ ಮಾತನಾಡಿದ ಅವರು, ಭಾರತದ ಪೂರ್ವದ ಜನರು ಚೀನಿಯರಂತೆ, ಪಶ್ಚಿಮದ ಜನರು ಅರಬ್ಬರಂತೆ ಕಾಣಿಸುತ್ತಾರೆ. ಉತ್ತರ ಭಾರತದವರು ಬಹುಶಃ ಬಿಳಿಯರಂತೆ ಕಂಡರೆ, ದಕ್ಷಿಣ ಭಾರತದ ಜನ ಆಫ್ರಿಕನ್ನರಂತೆ ಕಾಣಿಸುತ್ತಾರೆ. ಭಾರತದಂತಹ ವೈವಿಧ್ಯಮಯ ದೇಶದಲ್ಲಿ ಮಾತ್ರ ಎಲ್ಲರನ್ನೂ ಒಟ್ಟಿಗೆ ನೋಡಲು ಸಾಧ್ಯ. ನಾವೆಲ್ಲರೂ ಸಹೋದರ -ಸೋದರಿಯರಂತೆ ಜೀವಿಸುತ್ತಿದ್ದೇವೆ ಎಂದು ಪಿತ್ರೋಡಾ ಹೇಳಿದ್ದಾರೆ.
Advertisement
ರಾಹುಲ್ ಗಾಂಧಿಯವರ ಪರಮ ಆಪ್ತರಾದ ಸ್ಯಾಮ್ ಪಿತ್ರೋಡ ಅವರ ಹೇಳಿಕೆ ಭಾರತೀಯರ ವೈವಿಧ್ಯತೆಗೆ ಮಾಡಿರುವ ಅವಮಾನ. ವಿವಿಧತೆಯಲ್ಲಿ ಏಕತೆ ಎಂಬ ಧ್ಯೇಯ ವಾಕ್ಯಕ್ಕೆ ಈ ರೀತಿಯ ಹೇಳಿಕೆಗಳು ನಿಜಕ್ಕೂ ಕಪ್ಪು ಚುಕ್ಕಿ. ಜನರನ್ನು ವಿಭಜಿಸುವ ಈ ರೀತಿಯ ಕೃತ್ಯಗಳು ಕಾಂಗ್ರೆಸ್ ಪಕ್ಷಕ್ಕೆ ರಕ್ತಗತವಾಗಿದೆ. ನಮ್ಮ ದೇಶದ ಸಂಸ್ಕೃತಿ ವೈವಿಧ್ಯತೆಯನ್ನು ಗೌರವಿಸಿ…
— Pralhad Joshi (Modi Ka Parivar) (@JoshiPralhad) May 8, 2024
Advertisement
ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಭ್ರಾತೃತ್ವ ಮತ್ತು ಸ್ವಾತಂತ್ರ್ಯದಲ್ಲಿ ಬೇರೂರಿರುವ ಭಾರತದ ಮೂಲಭೂತ ತತ್ವಗಳು ಪ್ರಸ್ತುತ ಸವಾಲಿನಲ್ಲಿದೆ. ಈಗ ಭಾರತ ರಾಮ ನವಮಿ, ರಾಮ ಮಂದಿರದಿಂದ ಸವಾಲನ್ನು ಎದುರಿಸುತ್ತಿದೆ. ಸದಾಕಾಲ ದೇವಸ್ಥಾನಗಳಿಗೆ ಭೇಟಿ ನೀಡುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಒಬ್ಬ ಭಾರತೀಯ ನಾಯಕನಂತೆ ಮಾತನಾಡದೇ ಭಾರತೀಯ ಜನತಾ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಾರೆ ಎಂದು ಹೇಳುವ ಮೂಲಕ ಮತ್ತೆ ವಿವಾದವನ್ನು ತಮ್ಮ ಮೈಮೇಲೆ ಎಳೆದುಕೊಂಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಹೆಸರಿನಲ್ಲಿ ಒಂದು ಧರ್ಮಕ್ಕೆ ಮಿತಿಮೀರಿದ ಪ್ರಾಧಾನ್ಯತೆ ನೀಡಲಾಗುತ್ತಿದೆ: ಸ್ಯಾಮ್ ಪಿತ್ರೋಡಾ ಕಿಡಿ
Advertisement
ದೇಶದ ಜನರು 75 ವರ್ಷಗಳ ಕಾಲ ಬಹಳ ಸಂತೋಷದ ವಾತಾವರಣದಲ್ಲಿ ಬದುಕಿದ್ದಾರೆ. ಜನರು ಇಲ್ಲಿ ಕೆಲವು ಜಗಳಗಳನ್ನು ಬಿಟ್ಟು ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ಹೇಳಿದರು.
Advertisement
Very Racist comment made by Senior Congress leader and mentor of Rahul Gandhi Sam Pitroda.
He is saying Indian living in south look like African.
Indian living in North East look like Chinese.
Indian living in west look like Arabs.
Indians living in 10 Janpath Look like… pic.twitter.com/ZWyp6K4xwg
— Facts (@BefittingFacts) May 8, 2024
ಸ್ಯಾಮ್ ಪಿತ್ರೋಡಾ ಈ ಹಿಂದೆ ಸಂಪತ್ತಿನ ಮರು ಹಂಚಿಕೆಯ ಬಗ್ಗೆ ಹೇಳಿಕೆ ನೀಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯಿಂದ ಕಾಂಗ್ರೆಸ್ ಅಂತರವನ್ನು ಕಾಯ್ದುಕೊಂಡಿತ್ತು. ಈಗ ಲೋಕಸಭಾ ಚುನಾವಣೆ 4ನೇ ಹಂತ ನಡೆಯುವ ಸಮಯದಲ್ಲಿ ಮತ್ತೊಂದು ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ನನ್ನ ಹೆಸರು ಹೇಳದೇ ಇದ್ದರೆ ಕುಮಾರಸ್ವಾಮಿಗೆ ನಿದ್ದೆಯೇ ಬರಲ್ಲ: ಡಿಕೆಶಿ ತಿರುಗೇಟು
ಸ್ಯಾಮ್ ಪಿತ್ರೋಡಾ ಹೇಳಿದ್ದೇನು?
ಅಮೆರಿಕದಲ್ಲಿ ವ್ಯಕ್ತಿಯೊಬ್ಬ 100 ಮಿಲಿಯನ್ ಡಾಲರ್ ಮೌಲ್ಯದ ಸಂಪತ್ತನ್ನು ಹೊಂದಿದ್ದರೆ ಆತನ 45 ಪ್ರತಿಶತ ಸಂಪತ್ತು ಮಕ್ಕಳಿಗೆ ವರ್ಗಾವಣೆಯಾಗುತ್ತದೆ. 55% ಸಂಪತ್ತು ಸರ್ಕಾರಕ್ಕೆ ಹೋಗುತ್ತದೆ. ಇದೊಂದು ಆಸಕ್ತಿದಾಯಕ ಕಾನೂನು. ಈ ರೀತಿಯ ಯಾವುದೇ ಕಾನೂನು ಭಾರತದಲ್ಲಿ ಇಲ್ಲ. ಯಾರಾದರೂ 10 ಶತಕೋಟಿ ಮೌಲ್ಯದವರು ಮೃತಪಟ್ಟರೆ ಅವರ ಮಕ್ಕಳು 10 ಶತಕೋಟಿ ಪಡೆಯುತ್ತಾರೆ ಮತ್ತು ಸಾರ್ವಜನಿಕರಿಗೆ ಏನೂ ಸಿಗುವುದಿಲ್ಲ. ಈ ರೀತಿಯ ವಿಷಯಗಳ ಬಗ್ಗೆ ಜನರು ಚರ್ಚಿಸಬೇಕು. ಕಾಂಗ್ರೆಸ್ ಪಕ್ಷವು ಸಂಪತ್ತಿನ ಹಂಚಿಕೆಯನ್ನು ಉತ್ತಮಗೊಳಿಸುವ ನೀತಿಯನ್ನು ರೂಪಿಸುತ್ತದೆ ಎಂದಿದ್ದರು.