Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ

Belgaum

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾ

Public TV
Last updated: March 5, 2024 3:39 pm
Public TV
Share
3 Min Read
BY vijayendra jp nadda 2
SHARE

ಬೆಳಗಾವಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Ram Mandir) ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ (Jammu Kashmir) ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು (BJP) ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (JP Nadda) ಅವರು ತಿಳಿಸಿದರು.

ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ (Pakistan) ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ (Congress) ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮ ಸರ್ಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಅವರು ಗಮನ ಸೆಳೆದರು.

ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ. ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷ ತುಷ್ಠೀಕರಣ ಕಾರಣಕ್ಕಾಗಿ ಈ ಕಡೆ ಗಮನ ಹರಿಸಿರಲಿಲ್ಲ ಎಂದು ವಿವರಿಸಿದರು.

BY vijayendra JP Nadda

ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ನಮ್ಮದು. ಅಣ್ಣಾಸಾಹೇಬ್ ಜೊಲ್ಲೆಯವರು ಸೇರಿ 303 ಸಂಸದರು ನಮ್ಮ ಪಕ್ಷದವರು ಲೋಕಸಭೆಯಲ್ಲಿದ್ದಾರೆ. ನಮ್ಮ ಯುವಜನರಿಗೆ ತರಬೇತಿ ನೀಡಿ ಪ್ರಧಾನಿ ಮೋದಿಯವರು (PM Narendra Modi) ಆತ್ಮನಿರ್ಭರರನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಕೋಲ್ಕತ್ತಾ ಹೈಕೋರ್ಟ್ ಜಡ್ಜ್ ರಾಜೀನಾಮೆ, ಮಾ.7 ರಂದು ಬಿಜೆಪಿ ಸೇರ್ಪಡೆ

ವಿಕಸಿತ ಭಾರತ ಸಂಕಲ್ಪದಲ್ಲಿ ತಮ್ಮನ್ನು ತೊಡಗಿಕೊಳ್ಳುವಂತೆ ಮೋದಿಜೀ ಅವರು ಯುವಜನರಿಗೆ ಪ್ರೋತ್ಸಾಹ ಕೊಟ್ಟಿದ್ದಾರೆ ಎಂದ ಅವರು, ಕಾಂಗ್ರೆಸ್ ಭ್ರಷ್ಟಾಚಾರ, ಕಮಿಷನ್, ಕೌಟುಂಬಿಕವಾದದ ಪಕ್ಷ. 10 ವರ್ಷಗಳ ಹಿಂದೆ ಭಾರತವನ್ನು ಅಸಮರ್ಪಕ ನೀತಿಯುಳ್ಳ ದೇಶವಾಗಿ ನೋಡಲಾಗುತ್ತಿತ್ತು. ಸಮರ್ಥ ನಿರ್ಧಾರ ತೆಗೆದುಕೊಳ್ಳಲಾಗದ ದೇಶ ಎಂದೇ ಭಾರತವನ್ನು ಬಿಂಬಿಸುವ ಸ್ಥಿತಿ ಹಿಂದೆ ಇತ್ತು. 2014ರ ಬಳಿಕ ಮೋದಿಯವರ ನೇತೃತ್ವದಲ್ಲಿ ಭಾರತವು ಆತ್ಮವಿಶ್ವಾಸ ಹೊಂದಿದ ವಿಶ್ವಕ್ಕೇ ದೂರದೃಷ್ಟಿ ಕೊಡುವ ದೇಶವಾಗಿ ಬೆಳೆದುನಿಂತಿದೆ ಎಂದು ನುಡಿದರು.

ಸ್ವಾವಲಂಬಿ, ವಿಶ್ವಾಸಯುಕ್ತ ಜನರಿರುವ ದೇಶವನ್ನಾಗಿ ಭಾರತವನ್ನು ಮೋದಿಯವರು ಪರಿವರ್ತಿಸಿದ್ದಾರೆ. ಆತ್ಮನಿರ್ಭರ ದೇಶವಾಗಿ ಅದು ಬದಲಾಗುತ್ತಿದೆ. ಪ್ರಧಾನಿಯವರು ದೇಶವನ್ನು ಆತ್ಮವಿಶ್ವಾಸವುಳ್ಳ ರಾಷ್ಟ್ರವಾಗಿ ಪರಿವರ್ತಿಸಿದ್ದನ್ನು ನಾವು ಜನತೆಯ ಮುಂದಿಡಬೇಕು ಎಂದು ಮನವಿ ಮಾಡಿದರು.

BY vijayendra

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY vijayendra) ಅವರು ಮಾತನಾಡಿ, ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಮಾಡಿ ಹೊರಟಿದ್ದೇನೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ ದೊಡ್ಡ ಅಂತರದಲ್ಲಿ ಬಿಜೆಪಿ ಗೆಲ್ಲಿಸಲು ಮನವಿ ಮಾಡಿದರು. 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಭರವಸೆಯನ್ನು ನಡ್ಡಾಜೀ ಅವರಿಗೆ ನೀಡುವುದಾಗಿ ವಿಶ್ವಾಸದಿಂದ ನುಡಿದರು.

ರೈತರ ಸಂಕಷ್ಟಕ್ಕೆ ರಾಜ್ಯ ಸರಕಾರ ಸ್ಪಂದಿಸುತ್ತಿಲ್ಲ. ಆದರೆ, ಅಲ್ಪಸಂಖ್ಯಾತರ ಅಭಿವೃದ್ಧಿ ಕಾರ್ಯಕ್ಕೆ ಮುಖ್ಯಮಂತ್ರಿಗಳು 10 ಸಾವಿರ ಕೋಟಿ ರೂ. ಅನುದಾನವನ್ನು ಪ್ರಕಟಿಸಿದ್ದಾರೆ. ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರದ ಬಳಿ ಹಣ ಇಲ್ಲ. ಆದರೆ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ ಅದು ಮುಂದಾಗಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಜೆಡಿಎಸ್ ಪಕ್ಷ ಯಾವುದೇ ಕಾರಣಕ್ಕೂ ವಿಲೀನ ಇಲ್ಲ: ಸಿದ್ದರಾಮಯ್ಯಗೆ ದೇವೇಗೌಡ ತಿರುಗೇಟು

ಹಿಂದೂಗಳು ದಾನವಾಗಿ ಕೊಟ್ಟ 2 ಎಕರೆ ಜಾಗದಲ್ಲಿ ಆರಂಭಿಸಿದ್ದ ಪಶು ಆಸ್ಪತ್ರೆಯನ್ನು ಜಮೀರ್ ಅಹ್ಮದ್ ಅವರು ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ಕೊಡುತ್ತಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ತಕ್ಕ ಉತ್ತರವನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕೊಡಬೇಕಿದೆ ಎಂದು ಮನವಿ ಮಾಡಿದರು.

ರಾಜ್ಯಸಭಾ ಚುನಾವಣೆಯ ಬಳಿಕ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ. ಬಿಜೆಪಿ ಹೋರಾಟದ ಬಳಿಕ ನಿನ್ನೆ ಮೂವರನ್ನು ಬಂಧಿಸಿದ್ದಾರೆ. ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಿಂಚಿತ್ತಾದರೂ ದೇಶಪ್ರೇಮ ಇದ್ದರೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರಿಗೆ ಶಕ್ತಿ ನೀಡಿದ ರಾಜ್ಯಸಭಾ ಎಂ.ಪಿ. ನಾಸೀರ್ ಹುಸೇನ್ ವಿರುದ್ಧ ಕೂಡ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

TAGGED:bjpchikkodicongressJP Naddapakistanಕಾಂಗ್ರೆಸ್ಚಿಕ್ಕೋಡಿಜೆಪಿ ನಡ್ಡಾಪಾಕಿಸ್ತಾನಬಿಜೆಪಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
5 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?