ನವದೆಹಲಿ: ಈ ಬಾರಿಯೂ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ (Wayanad Lok Sabha Constituency) ರಾಹುಲ್ ಗಾಂಧಿ (Rahul Gandhi) ಸ್ಪರ್ಧಿಸುವುದು ಬಹುತೇಕ ಅಂತಿಮವಾಗಿದೆ.
ಕಾಂಗ್ರೆಸ್ (Congress) ಚುನಾವಣಾ ಸಮಿತಿಯು ಗುರುವಾರ ರಾತ್ರಿ ಮೊದಲ ಸಭೆ ನಡೆಸಿ 10 ರ ಪೈಕಿ 6 ರಾಜ್ಯಗಳ ಬಹುತೇಕ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.
Advertisement
ನಾವು ಕೇರಳ, ಕರ್ನಾಟಕ, ತೆಲಂಗಾಣ, ಛತ್ತೀಸ್‌ಗಢ, ದೆಹಲಿ ಮತ್ತು ಲಕ್ಷದ್ವೀಪಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದೇವೆ. ಸೀಟು ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿಯುವ ನೀರು ಅನ್ಯ ಉದ್ದೇಶಕ್ಕೆ ಬಳಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ 5,000 ರೂ. ದಂಡ
Advertisement
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್‌ನಿಂದ, ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಛತ್ತೀಸ್‌ಗಢದ ರಾಜನಂದಗಾಂವ್‌ನಿಂದ ಮತ್ತು ಜ್ಯೋತ್ಸ್ನಾ ಮಹಂತ್ ಕೊರ್ಬಾದಿಂದ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ಕೇರಳದ 20 ಕ್ಷೇತ್ರಗಳ ಪೈಕಿ 16ರಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದೆ. ಕೇಂದ್ರದ ಮಾಜಿ ಸಚಿವ, ಹಾಲಿ ಸಂಸದ ಶಶಿ ತರೂರ್ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ ಎನ್ನಲಾಗುತ್ತಿದೆ.
Advertisement
ಕರ್ನಾಟಕದ (Karnataka) ಬಹುತೇಕ ಸಚಿವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮಂತ್ರಿಗಳನ್ನು ಕಣಕ್ಕಿಳಿಸುವುದು ಅನುಮಾನ ಎನ್ನಲಾಗುತ್ತಿದೆ. ಇಬ್ಬರು ಸಚಿವರು ಮೀಸಲು ಕ್ಷೇತ್ರದಿಂದ ಗೆದ್ದಿದ್ದಾರೆ. ಈ ಪೈಕಿ ಒಬ್ಬರು ಹಿಂದಕ್ಕೆ ಸರಿದರೆ ಒಬ್ಬರು ಮಾತ್ರ ಕಣಕ್ಕೆ ಇಳಿಯುವ ಸಾಧ್ಯತೆಯಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಕಲಬುರಗಿ (Kalaburagi) ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದನ್ನೂ ಓದಿ: ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 100 ರೂ. ಇಳಿಕೆ – ಮಹಿಳಾ ದಿನಾಚರಣೆಗೆ ಮೋದಿ ಗಿಫ್ಟ್
ಮಹಾರಾಷ್ಟ್ರ ಮತ್ತು ಬಂಗಾಳದಲ್ಲಿ ಒಟ್ಟು 90 ಕ್ಷೇತ್ರಗಳು ಇರುವ ಕಾರಣ ಇನ್ನೂ ಈ ರಾಜ್ಯದಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿಲ್ಲ. ಮಹಾರಾಷ್ಟ್ರದಲ್ಲಿ ಒಟ್ಟು 48 ಕ್ಷೇತ್ರಗಳಿದ್ದು ಮಹಾ ವಿಕಾಸ್ ಅಘಾಡಿ ಮೈತ್ರಿ ಪಕ್ಷಗಳಾದ ಕಾಂಗ್ರೆಸ್, ಶರದ್ ಪವಾರ್ ಅವರ ಎನ್‌ಸಿಪಿ, ಉದ್ಧವ್ ಠಾಕ್ರೆ ಅವರ ಶಿವಸೇನೆಯ ಜೊತೆ ಮಾತುಕತೆ ನಡೆಯುತ್ತಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಸೀಟು ಹಂಚಿಕೆ ಸಂಬಂಧ ಮಾತುಕತೆ ನಡೆಯುತ್ತಿದ್ದು ಇನ್ನೂ ಅಂತಿಮಗೊಂಡಿಲ್ಲ.