ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಜೂನ್ 8 ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ.
ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಇಂದು ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ.
Advertisement
Advertisement
ಪ್ರಧಾನಿ ಮೋದಿ ಕೊನೆಯದಾಗಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು. ಇಂದಿಗೆ 17 ನೇ ಲೋಕಸಭೆ (17th Lok Sabha) ವಿಸರ್ಜನೆಗೆ ಶಿಫರಾಸು ಮಾಡಲಾಗಿದೆ.
Advertisement
ಜೂನ್ 7 ರ ಶುಕ್ರವಾರ ಮಧ್ಯಾಹ್ನ 2.30 ಕ್ಕೆ ಸಂಸತ್ ಭವನದಲ್ಲಿ ಎನ್‌ಡಿಎ ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಮರುದಿನ ಅಂದರೆ ಜೂನ್ 8 ರಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಪ್ರಮಾಣ ವಚನ ಕಾರ್ಯಕ್ರಮ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಯಬಹುದು ಎಂಬುದಾಗಿ ಮೂಲಗಳಿಂದ ಮಾಹಿತಿ ಲಭಿಸಿದೆ.